ಪ್ರತಾಪ್‌ ಸಿಂಹ ಮೊಬೈಲ್‌ ಎಸ್‌ಐಟಿಗೆ ಕೊಟ್ಟರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಖಚಿತ: ಕಾಂಗ್ರೆಸ್‌ ಮುಖಂಡ ಎಂ ಲಕ್ಷ್ಮಣ್

Date:

Advertisements

ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್‌ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವಿಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ಹೊಸ ಬಾಂಬ್ ಸಿಡಿಸಿದ್ದಾರೆ.

ಮಡಿಕೇರಿಯಲ್ಲಿ ಮಾತಾನಾಡಿದ ಅವರು, 2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವಿಡಿಯೋಗಳು ಕಂಡು ಬಂದಿದ್ದವು. ಇದನ್ನು ನೋಡಿದ ಅಮಿತ್ ಶಾ ಅವರೇ ದಿಗ್ಭ್ರಮೆಗೊಂಡಿದ್ದರು. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ರೀತಿಯಲ್ಲಿಯೇ ಪ್ರತಾಪ್ ಸಿಂಹ ಅವರ ಮೊಬೈಲ್‌ನಲ್ಲಿ ವಿಡಿಯೋಗಳಿವೆ. ಅಂತಹ ವಿಡಿಯೋ ಇರುವುದಕ್ಕೆ ಗೃಹ ಸಚಿವರು ಪ್ರತಾಪ್ ಸಿಂಹ ಮೊಬೈಲ್ ಸೀಜ್‌ ಮಾಡಿಸಿದ್ದರು. ಪ್ರತಾಪ್ ಸಿಂಹ ಅಶ್ಲೀಲ ವಿಡಿಯೋಗಳು ನನ್ನ ಮೊಬೈಲ್‌ನಲ್ಲೇ ಇವೆ, ಮೊಬೈಲ್‌ನಲ್ಲಿರುವ ವಿಡಿಯೋಗಳನ್ನು ನೋಡಿದ ನಂತರವೇ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ನೀಡಬಾರದು ಎಂಬ ನಿರ್ಧಾರ ಕೈಗೊಂಡರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

ಇಂತಹ ಪ್ರತಾಪ್ ಸಿಂಹಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಪ್ರದೀಪ್ ಈಶ್ವರ್ ಸೇರಿದಂತೆ ಹಲವಾರು ನಾಯಕರಿಗೆ ಬೈಯೋದೆ ಇವನ ಕೆಲಸವಾಗಿದೆ‌. ದೆಹಲಿಯಲ್ಲಿ ಇವರಿಗೆ ಬ್ಲೂ ಬಾಯ್‌ ಎನ್ನುತ್ತಾರೆಂದು ಎಂ ಲಕ್ಷ್ಮಣ್ ಲೇವಡಿ ಮಾಡಿದ್ದಾರೆ.

ಪ್ರತಾಪ್‌ ಸಿಂಹಗೆ ಕಾಂಗ್ರೆಸ್ ಪಕ್ಷ ಹಾಗೂ ತನ್ನ ಕುಟುಂಬದ ಬಗ್ಗೆ ಟೀಕಿಸುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ ಲಕ್ಷ್ಮಣ್‌ 2024ರ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟಿದ್ದರೆ ನಾನು 3 ಲಕ್ಷ ಅಂತರದಲ್ಲಿ ಗೆಲುವು ಸಾಧಿಸುತ್ತಿದ್ದೆ. ಇನ್ನು ಮುಂದೆ ಪ್ರತಾಪ್‌ ಸಿಂಹ ಎಲ್ಲಿ ನಿಂತರೂ ನಾನು ಅದೇ ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X