ಹೊಲದಲ್ಲಿದ್ದಾಗ ಸಿಡಿಲು ಬಡಿದು ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ.
ಸಾವನ್ನಪ್ಪಿದ ಮಹಿಳೆಯನ್ನು ಭವಾನಿ ಗಂಡ ನಾಗರಾಜ (26) ನಾಯಕ್ ಎಂದು ಹೇಳಲಾಗಿದೆ. ಇಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಜಿಟಿ ಜಿಟಿ ಮಳೆ ಸುರಿಯುತ್ತಿತ್ತು. ಹೊಲದಲ್ಲಿದ್ದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾತಿ ದೌರ್ಜನ್ಯ ನಿರ್ಮೂಲನೆಗೆ ಒಗ್ಗಟ್ಟಾಗಬೇಕು – ಮೋಹನ್ ಗೋಸ್ಲೆ
ಮೃತ ಭವಾನಿ 7 ತಿಂಗಳು ಗರ್ಭಿಣಿ ಇದ್ದರು ಎಂದು ಮೂಲಗಳು ತಿಳಿಸಿವೆ. ಮೃತಳ ಕುಟುಂಬಕ್ಕೆ ತಕ್ಷಣ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ತಿಳಿಸಿದರು.
