ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ಅಬ್ದುಲ್ ರಹೆಮಾನ್ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪರಿಶಿಷ್ಟ ಜಾತಿ ವಿದ್ಯಾರ್ಥಿ ನಿಲಯದಲ್ಲಿ ಸ್ನೇಹಿತರ ಬಳಗದಿಂದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸ್ಪ್ರರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಕ್ರೀಡಾಸಕ್ತಿ ಬೆಳೆಸಿಕೊಳ್ಳುವುದು ಹಾಗೂ ಕ್ರೀಡಾ ಮನೋಭಾವ ಪರೀಕ್ಷೆಗಳನ್ನು ಎದುರಿಸುವ ಕುರಿತ ಕಾರ್ಯಗಾರದಲ್ಲಿ ಮಾತನಾಡಿದರು.
ಸದೃಢ ಯುವ ಪೀಳಿಗೆಯಿಂದಲೇ, ಸದೃಢ ಸಮಾಜ ಹಾಗೂ ಸದೃಢ ದೇಶ ನಿರ್ಮಾಣ ಸಾಧ್ಯ. ಇದಕ್ಕೂ ಮುನ್ನ ವಸತಿ ನಿಲಯದ ವಿದ್ಯಾರ್ಥಿಗಳಿಗೆ, ವಾಲಿಬಾಲ್ ಕ್ರೀಡೆ ಸೇರಿದಂತೆ ವಿವಿಧ ಕ್ರೀಡೆಗಳನ್ನು ಜರುಗಿಸಲಾಯಿತು. ಕಾರ್ಯಗಾರದ ಕೊನೆಯಲ್ಲಿ, ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶ್ರಮಿಕ ಶಕ್ತಿ ಸಂಯೋಜಿತ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ ಘಟಕ ಉದ್ಘಾಟನೆ
ಸ್ನೇಹಿತರ ಬಳಗದ ಪದಾಧಿಕಾರಿಗಳಾದ ರೈಲ್ವೆ ಇಲಾಖೆಯ ಸಿಬ್ಬಂದಿ ಅಬ್ದುಲ್ ವಾಹಿದ್, ಅಬ್ದುಲ್ ಫಯಾಜ್, ಬಸವರಾಜ್, ನಿಸಾರ್, ಫಹರುದ್ಧೀನ್, ವಸತಿ ನಿಲಯದ ವಿದ್ಯಾರ್ಥಿಗಳು, ವಸತಿ ನಿಲಯದ ಸಿಬ್ಬಂದಿಗಳು, ಯುವಗಣ್ಯರು ಇದ್ದರು.