ಗದಗ | ಬಡಮಹಿಳೆ ಮತ್ತು ಮಕ್ಕಳಿಗೆ ವೇದ್ಯಕೀಯ ಸೇವೆ ತ್ವರಿಗತಿಯಲ್ಲಿ ದೊರಕಿಸಿ : ಸಚಿವ ಎಚ್.ಕೆ.ಪಾಟೀಲ

Date:

Advertisements

“ಬಡಮಹಿಳೆ ಮತ್ತು ಮಕ್ಕಳಿಗೆ ವೈದ್ಯಕೀಯ ಸೇವೆ ತ್ವರಿತಗತಿಯಲ್ಲಿ ದೊರಕಬೇಕು. ಅವರು ಚಿಕಿತ್ಸೆಯಿಂದ ವಂಚಿತರಾಗಬಾರದು” ಎಂದು ರಾಜ್ಯದ ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಕೆ ಪಾಟೀಲ್ ತಿಳಿಸಿದರು.

ಗದಗ ಪಟ್ಟಣದಲ್ಲಿ ರವಿವಾರ ದುಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ, ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

“ಆಸ್ಪತ್ರೆಯಲ್ಲಿ ರೋಗಿಗಳಿಗೆ ಮೂಲಭೂತ ಸೌಲಭ್ಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಆಸ್ಪತ್ರೆಯ ಒಳಗಡೆ ಹಾಗೂ ಹೊರಗಡೆ ಆವರಣ ಸ್ವಚ್ಛತೆಯಿಂದ ಕೂಡಿರುವಂತೆ ಕ್ರಮ ವಹಿಸಬೇಕು. ಆಸ್ಪತ್ರೆಗೆ ಬಂದ ರೋಗಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಚಿಕಿತ್ಸೆ ನೀಡಬೇಕು” ಎಂದು ನಿರ್ದೇಶನ ನೀಡಿದರು.

Advertisements

“ಜಿಲ್ಲಾ ಉಸ್ತುವಾರಿ ಸಚಿವರು ಆಸ್ಪತ್ರೆಯಲ್ಲಿನ ದಾಖಲಾದ ರೋಗಿ ಹಾಗೂ ಅವರ ಸಂಬಂಧಿಕರೊಂದಿಗೆ ಮಾತನಾಡಿ ಮೂಲಭೂತ ಸೌಕರ್ಯಗಳು ಒದಗುತ್ತಿರುವ ಕುರಿತು ಹಾಗೂ ಕುಂದುಕೊರತೆಗಳನ್ನು” ಆಲಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವನಗೌಡ ಕರಿಗೌಡರ ಮಾತನಾಡಿ, “ಪ್ರತಿದಿನ 80 ರಿಂದ 100 ಒಪಿಡಿ ಹೊರರೋಗಿಗಳ ವಿಭಾಗದಲ್ಲಿ ಬಾಣಂತಿಯರು ಹಾಗೂ ಸ್ತ್ರೀ ರೋಗಿಗಳು ಚಿಕಿತ್ಸೆ ಸೇವೆಯನ್ನು ಪಡೆಯುತ್ತಾರೆ. ಸಂತಾನ ಹರಣ ಶಸ್ತ್ರ ಚಿಕಿತ್ಸೆ 200 ರಿಂದ 300 ಸೇವೆಯನ್ನು ಪಡೆಯುತ್ತಾರೆ” ಎಂದು ಸಭೆಗೆ ತಿಳಿಸಿದರು. 

“ಒಂದು ವರ್ಷದಲ್ಲಿ ಒಟ್ಟು 500 ರಿಂದ 600 ವರೆಗೆ ಹೆರಿಗೆ ಚಿಕಿತ್ಸೆ ಮಾಡಲಾಗುತ್ತಿದೆ” ಎಂದು ಅಂಕಿ ಅಂಶವನ್ನು ಸಭೆಗೆ ತಿಳಿಸಿದರು.

“ಜಿಲ್ಲಾ ಕೇಂದ್ರದಲ್ಲಿ ಹೆರಿಗೆ ಆಸ್ಪತ್ರೆಗೆ ಬರುವ ಹೆರಿಗೆ ಗರ್ಭಿಣಿ ತಾಯಂದಿರು ಸಹಜ ಹೆರಿಗೆಯು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ತಾಲೂಕು ಆರೋಗ್ಯ ಕೇಂದ್ರದಲ್ಲಿ ನಡೆಯುತ್ತವೆ. ಮತ್ತು ಸಹಜವಾಗಿ ಹೆರಿಗೆ ಆಗದೆ ಇರುವ ಗರ್ಭಿಣಿ ತಾಯಂದಿರಿಗೆ ಗದಗ್ ಕೇಂದ್ರ ಸ್ಥಾನದಲ್ಲಿರುವ ಮಾನ್ವಿ ದುಂಡಪ್ಪ ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. 4:30 ಗಂಟೆಯ ನಂತರದ ಅವಧಿಯಲ್ಲಿ ಸಾಯಂಕಾಲ ಅರವಳಿಕೆ ತಜ್ಞರು ಇಲ್ಲದೆ ಇರುವ ಕಾರಣ, ಕೆ ಎಚ್ ಪಾಟೀಲ್ ಸರ್ಕಾರಿ ಆಸ್ಪತ್ರೆಗೆ ಹೆರಿಗೆ ಚಿಕಿತ್ಸೆಗೆ ಹೋಗುತ್ತಾರೆ” ಎಂದು ಸಭೆಯ ಗಮನಕ್ಕೆ ತಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನದಿ ಜೋಡಣೆಗೆ ಎಲ್ಲ ಜನಪ್ರತಿನಿದಿನಗಳು ಒಟ್ಟುಗೂಡಿ ಒತ್ತಡ ತರೋಣ: ಸಂಸದ ಬಸವರಾಜ ಬೊಮ್ಮಾಯಿ

ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು “ಆಸ್ಪತ್ರೆಗಳಲ್ಲಿನ ಕುಂದುಕೊರತೆಗಳ ನಿವಾರಣೆಗೆ ಕ್ರಮ ವಹಿಸಲಾಗುವುದು” ಎಂದು ತಿಳಿಸಿದರು.

ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರ್‌ಸಾಬ ಬಬರ್ಜಿ, ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಮಕ್ಕಳ ತಜ್ಞರು ಸ್ತ್ರೀ ರೋಗ ತಜ್ಞರು, ವೈದ್ಯರು ಅಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X