ಔರಾದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿರುವವರ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿ ಎಂಟು ಜನರನ್ನು ಬಂಧಿಸಿ, ನಗದು ₹67,925 ಸಾವಿರ ವಶಕ್ಕೆ ಪಡೆದಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜುವಾಡುತ್ತಿದ್ದ ಖಚಿತ ಮಾಹಿತ ಮೇರೆಗೆ ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್ ನೇತ್ರತ್ವದಲ್ಲಿ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ಎಂಟು ಜನರನ್ನು ಬಂಧಿಸಿದ್ದಾರೆ.
ಈ ಸಂಬಂಧ ಔರಾದ್ ಪೊಲೀಸ್ ಠಾಣೆಯಲ್ಲಿ ಕಲಂ 87 ಕೆಪಿ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡದ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಶ್ಲಾಘಿಸಿದ್ದಾರೆ.
ಪದೇ ಪದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ರೌಡಿ ಶೀಟ್ ತೆರೆಯಲಾಗುವುದು, ಗಡಿಪಾರು ಮಾಡಲಾಗುವುದು ಎಂದು ಎಸ್ಪಿ ಪ್ರದೀಪ ಗುಂಟಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಬೀದರ್ | ಬಸವತತ್ವ ವಿರೋಧಿ ‘ದಸರಾ ದರ್ಬಾರ್’ ಕಾರ್ಯಕ್ರಮ ಕೈಬಿಡಿ : ಬಸವರಾಜ ಧನ್ನೂರ