ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದ್ದು, ಸಿಡಿಲಿಗೆ ನಾಲ್ಕು ಕುರಿಗಳು ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದ ನಿವಾಸಿ ರವಿ ಶಾಮರಾವ್ ಅವರಿಗೆ ಸೇರಿದ್ದ ಅಂದಾಜು 70 ಸಾವಿರ ರೂ. ಮೌಲ್ಯದ ಕುರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.
ಕುರಿ ಸಾಗಾಣಿಕೆಯಿಂದ ಉಪಜೀವನ ನಡೆಸುತ್ತಿರುವ ರವಿ ಅವರಿಗೆ ಕುರಿಗಳ ಸಾವಿನಿಂದ ತುಂಬಾ ನಷ್ಟ ಉಂಟಾಗಿದೆ. ಕೂಡಲೇ ಸರ್ಕಾರ ಇವರಿಗೆ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಸುಲೇಪೇಟ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು.
ಇದನ್ನೂ ಓದಿ : ಕೊಪ್ಪಳ | ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವು