ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಶಾಸಕಾಂಗ ಸಭೆ ನಡೆಸಿದರು.
ಸಿದ್ದರಾಮಯ್ಯ ಅವರು ಮಾತನಾಡಿ, ಅಧಿವೇಶನದಲ್ಲಿ ಸರ್ಕಾರದ ಸಾಧನೆಯನ್ನು ಸಮರ್ಥವಾಗಿ ಮಂಡಿಸುವಂತೆ ಮತ್ತು ವಿರೋಧ ಪಕ್ಷಗಳ ಆಧಾರ ರಹಿತ ಆರೋಪಗಳು ಹಾಗೂ ಸುಳ್ಳುಗಳನ್ನು ದಾಖಲೆ ಹಾಗೂ ಅಂಕಿ ಅಂಶಗಳ ಸಮೇತ ಸಮರ್ಥವಾಗಿ ಪ್ರಸ್ತಾಪಿಸಿ ಉತ್ತರ ನೀಡುವಂತೆ” ವಿವರಿಸಿದರು. ರಾಜಣ್ಣ ವಿಚಾರವಾಗಿ ನಡೆದ ಚರ್ಚೆ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಡಾ ಜಿ ಪರಮೇಶ್ವರ್, ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಆರ್ ವಿ ದೇಶಪಾಂಡೆ, ಎನ್ ಎಸ್ ಬೋಸರಾಜ್, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಮತ್ತಿತರರು ಭಾಗವಹಿಸಿದ್ದರು.
