ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ

Date:

Advertisements

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೊದಲ ಬಾರಿಗೆ ದೂರುದಾರ ಗುರುತಿಸಿದ್ದ 13 ಸ್ಥಳಗಳ ಪೈಕಿ 12ರಲ್ಲಿ ಶೋಧ ನಡೆದಿತ್ತು. ಆದರೆ 13ನೇ ಸ್ಥಳ ಶೋಧ ಮಾಡಿರಲಿಲ್ಲ. ಇಂದಿನಿಂದ 13ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇಂದು ಬೆಳಿಗ್ಗೆ 11:30 ಆಸುಪಾಸಿನಿಂದ 13ನೇ ಪಾಯಿಂಟ್‌ನಲ್ಲಿ ಶೋಧ ಆರಂಭವಾಗಿದೆ. ಜಿಆರ್‌ಪಿ ಕಾರ್ಯಾಚರಣೆ ನಡೆಯುತ್ತಿದೆ. ಹಾಗೆಯೇ 13ನೇ ಪಾಯಿಂಟ್ ಪಕ್ಕದಲ್ಲೂ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಕೂಡಾ ಸ್ಥಳಕ್ಕೆ ಆಗಮಿಸಿದ್ದಾರೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶರು

Advertisements

ಈವರೆಗೆ ಎರಡು ಸ್ಥಳಗಳಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಪಾಯಿಂಟ್ ನಂಬರ್ ಆರು ಮತ್ತು ಪಾಯಿಂಟ್ ನಂಬರ್ 11ರ ಸಮೀಪದಲ್ಲಿ ಹಲವು ವರ್ಷಗಳು ಹಳೆಯ ಅವಶೇಷ ಪತ್ತೆಯಾಗಿದೆ. 13ನೇ ಸ್ಥಳದಲ್ಲಿ ಹಲವು ಶವಗಳನ್ನು ಅಕ್ರಮವಾಗಿ ಹೂತಿರುವುದಾಗಿ ದೂರುದಾರ ಹೇಳಿದ್ದಾನೆ ಎನ್ನಲಾಗಿದೆ. ಆದ್ದರಿಂದ ಈ ಸ್ಥಳದಲ್ಲಿ ಶೋಧವು ಹೆಚ್ಚು ಗಮನ ಸೆಳೆದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X