ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

Date:

Advertisements

ಕೋಲಾರ ತಾಲೂಕಿನ ನರಸಾಪುರ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಅವ್ಯವಸ್ಥೆಯಿಂದ ಗ್ರಾಮದ ಮುಖ್ಯರಸ್ತೆ ಕೆಸರುಗದ್ದೆಯಂತಾಗಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ.

“ನರಸಾಪುರ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾರ್ಯ ನಿರ್ವಹಣೆಯಿಂದ ತೀವ್ರ ತೊಂದರೆಯಾಗುತ್ತಿದೆ. ನಿರಂತರವಾಗಿ ಸುರಿದ ಭಾರೀ ಮಳೆಗೆ ಮುಖ್ಯ ರಸ್ತೆಗಳೆಲ್ಲ ಹದಗೆಟ್ಟಿದ್ದು, ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ರಸ್ತೆಗಳಲ್ಲಿ ವಾಹನಗಳು ಸುರಕ್ಷಿತವಾಗಿ ಓಡಾಡಲು ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

ನರಸಾಪುರ ಗ್ರಾಮದ ಮುಖಂಡ ಎನ್ ಲೊಕೇಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದ ಮುಖ್ಯರಸ್ತೆಯ ಅಗಲೀಕರಣದ ಕಾಮಗಾರಿಯ ಗುತ್ತಿಗೆ ಪಡೆದಂತಹ ಗುತ್ತಿಗೆದಾರನ ವಿಳಂಬ ಕಾಮಗಾರಿಯಿಂದ ನರಸಾಪುರ ಗ್ರಾಮದ ಒಳಗಿನ ಮುಖ್ಯ ರಸ್ತೆಯು ತೀರಾ ಕೆಸರು ಗದ್ದೆಯಂತಾಗಿದ್ದು, ವಾಹನಗಳು ಸುರಕ್ಷಿತವಾಗಿ ಸಂಚರಿಸುವುದಕ್ಕಂತೂ ತುಂಬಾ ಕಷ್ಟವಾಗಿದೆ. ಇದಕ್ಕೆ ಗುತ್ತಿಗೆದಾರನು ಅನುಸರಿಸುತ್ತಿರುವ ಮಂದಗತಿಯೇ ಕಾರಣವಾಗಿದೆ” ಎಂದರು.

Advertisements

“ರಸ್ತೆಯ ಅಗಲೀಕರಣದ ಕಾಮಗಾರಿಯ ಕೆಲಸದ ಮಧ್ಯೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಎಲಕ್ಕಿಂತ ಹಳ್ಳ ಕೊಳ್ಳಗಳೇ ಜಾಸ್ತಿಯಾಗಿದ್ದು, ಮಳೆ ನೀರು ತುಂಬಿ ರಸ್ತೆಗಳು ಸಾರ್ವಜನಿಕರು ಓಡಾಡಲು ಕಷ್ಟವಾಗಿದೆ. ಕಾಮಗಾರಿಯನ್ನು ಇತ್ತೀಚೆಗೆ ಪ್ರಾರಂಭ ಮಾಡಿದ್ದು, ಕಾಮಗಾರಿ ವಿಳಂಬ ರೀತಿಯಲ್ಲಿ ಸಾಗುತ್ತಿದೆ. ಇದಕ್ಕೆ ಸಾರ್ವಜನಿಕರು ತುಂಬಾ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸುವ ಕ್ರಮವಹಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತ!

ಗ್ರಾಮದ ಮುಖಂಡ ಅವಿನಾಶ್ ಮಾತನಾಡಿ, “ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ಬಸ್ ನಿಲ್ದಾಣವನ್ನು ನೆಲಸಮ ಮಾಡಿ ಪ್ರಯಾಣಿಕರಿಗೆ ತಂಗುದಾಣವಿಲ್ಲದೆ ಕೆಸರು ಗದ್ದೆಯಂತಾಗಿರುವ ರಸ್ತೆಯ ಮಧ್ಯೆ ನಿಂತು ಬಸ್‌ಗಳಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಪ್ರಯಾಣಿಕರು, ವೃದ್ಧರು ಮತ್ತು ವಿಶೇಷ ಚೇತನರಿಗೆ ಬಸ್ ನಿಲ್ದಾಣವಿಲ್ಲದೆ ಮಳೆ ಬಿಸಿಲು ಗಾಳಿ ಎನ್ನದೆ ರಸ್ತೆಯ ಮಧ್ಯೆ ನಿಲ್ಲಲು ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ” ಎಂದು ಆರೋಪಿಸಿದರು.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X