ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ್, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಜನವರಿಯಲ್ಲಿ ಬೆಂಗಳೂರಿನಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಾಗ, ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿತ್ತು. ಆದರೆ, ಈವರೆಗೂ ಅದು ಈಡೇರಿಲ್ಲ. ಹಾಗಾಗಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಹೊರಡಿಸಿದ ಆದೇಶವನ್ನು ತಾವೇ ಜಾರಿ ಮಾಡುತ್ತಿಲ್ಲ. ಇದು ಅನ್ಯಾಯದ ಧೋರಣೆ. ಹಳ್ಳಿಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಜವಾಬ್ದಾರಿ ಹೊತ್ತುಕೊಂಡು ಕೆಲಸ ಮಾಡುತ್ತಿದ್ದಾರೆ. ಆದರೂ ಸರ್ಕಾರ ಸೇವೆ ನಿರ್ಲಕ್ಷ್ಯ ಮಾಡುತ್ತಿದೆ. ಈ ಕೂಡಲೇ ಆದೇಶ ಜಾರಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಅವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡುವುದನ್ನು ಕೈಬಿಡಬೇಕು. ಸೂಕ್ತ ವೇತನದೊಂದಿಗೆ ಆಶಾ ಸುಗಮಕಾರರನ್ನು ಮುಂದುವರಿಸಬೇಕು. ಸೇವಾನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ₹1,000 ಪ್ರೋತ್ಸಾಹಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಿದರು.
ಕಲಬುರಗಿ ಜಿಲ್ಲಾ ಗೌರವಾಧ್ಯಕ್ಷ ವಿ.ಜಿ.ದೇಸಾಯಿ ಸೇರಿದಂತೆ ಪ್ರಮುಖರಾದ ಗೀತಾ ಮಳ್ಳಿ, ಶಿವಲಿಂಗಮ್ಮ, ಸಂಗೀತಾ ಸಾವಳಗಿ, ಜಯಶ್ರೀ, ವಿಜಯಲಕ್ಷ್ಮೀ ತಾಯಮ್ಮ, ಶಾರದಾ ಈಜೇರಿ, ಲಕ್ಷ್ಮೀ ಮಂದೇವಾಲ, ಯಾಸಮೀನ ಅಂಕಲಗಾ, ಸುಗಂಧಾ ಅನ್ನೋಳ್ಳಿ, ಪ್ರಭಾ ಶಹಾಬಾದ, ಮಂಜುಳಾ ವಾಡಿ, ಸಾವಿತ್ರಿ ಇಂಗಳಗಿ, ರೇಣುಕಾ, ನಾಗವೇಣಿ ಚಿಂಚೋಳಿ, ಯಶೋಧಾ, ಲಕ್ಷ್ಮೀ ಸುಲೆಪೇಟ, ಲಕ್ಷ್ಮೀ ಚಿಮ್ಮನಚೂಡ, ಸಾಬಮ್ಮ, ವಿಜಯಲಕ್ಷ್ಮೀ, ಲಕ್ಷ್ಮೀ ಮಲಖೇಡ, ಲಕ್ಷ್ಮೀ ಕುರಕುಂಟಾ, ಸವಿತಾ ಅಫಜಲಪುರ, ಭಾರತಿ, ಗೌರಮ್ಮ, ಲಕ್ಷ್ಮೀ ಗೊಬ್ಬುರ, ಮಮತಾಜ, ಸೇರಿದಂತೆ, ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಿನ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ :
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಯಾದಗಿರಿ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಸಂಘದ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಸಂಘದ ಕಾರ್ಯದರ್ಶಿ ದೇವಕ್ಕಿ ವನದುರ್ಗ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್ ಸೇರಿದಂತೆ ಪುಷ್ಪಲತಾ, ನೀಲಮ್ಮ, ತಾಯಮ್ಮ , ಶಾಂತವ್ವ, ನಿಂಗಮ್ಮ, ಅಮೃತ, ದಾನಮ್ಮ, ಗೀತಾ, ಮೀನಾಕ್ಷಿ, ಗೌರಮ್ಮ, ಶಾರದಾದೇವಿ ಹಾಗೂ ನೂರಾರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ | ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತ!
https://shorturl.fm/E1aeX
https://shorturl.fm/DAL5l