ನ್ಯಾ. ಯಶವಂತ ವರ್ಮಾ ವಿರುದ್ಧದ ತನಿಖೆಗಾಗಿ ಮೂವರು ಸದಸ್ಯರ ಸಮಿತಿ ರಚನೆ

Date:

Advertisements
  • ವಿಚಾರಣಾ ಸಮಿತಿಯಲ್ಲಿ ರಾಜ್ಯದ ಇಬ್ಬರು ನೇಮಕ

ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ ಮೂವರು ಸದಸ್ಯರ ಸಮಿತಿಯನ್ನು ರಚನೆ ಮಾಡಿರುವುದಾಗಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ತಿಳಿಸಿದ್ದಾರೆ.

ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಮತ್ತು ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲ ಬಿ ವಾಸುದೇವ ಆಚಾರ್ಯ (ಪ್ರಖ್ಯಾತ ನ್ಯಾಯಶಾಸ್ತ್ರಜ್ಞ, ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲರು) ಇದ್ದಾರೆ.

ನ್ಯಾ. ಅರವಿಂದ ಕುಮಾರ್ ಅವರು ಬೆಂಗಳೂರು ಕಾನೂನು ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದು, 1987ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ನಂತರ 2009ರಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2021ರಲ್ಲಿ ಗುಜರಾತ್ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆದಿದ್ದಾರೆ.

Advertisements

91 ವರ್ಷದ ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರು ಕಳೆದ ಆರು ದಶಕಗಳಿಂದ ವಕೀಲಿ ವೃತ್ತಿಯಲ್ಲಿದ್ದಾರೆ. 1989ರಿಂದ 2012ರವರೆಗೆ ಅವರು ಐದು ಬಾರಿ ಕರ್ನಾಟಕದ ಅಡ್ವಕೇಟ್ ಜನರಲ್ ಆಗಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಹಾಗೂ ಇತರರ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದರು.

ಕೇಂದ್ರ ಸರ್ಕಾರವು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ ವರ್ಮಾ ವಿರುದ್ಧ ಮಹಾಭಿಯೋಗ ಪ್ರಸ್ತಾವನೆಯ ಪ್ರಕ್ರಿಯೆಯನ್ನು ಆರಂಭಿಸಿದ್ದು, ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಪಕ್ಷಾತೀತವಾಗಿ 200ಕ್ಕೂ ಹೆಚ್ಚು ಸಂಸತ್ ಸದಸ್ಯರು (ಸಂಸದರು) ಅಂಕಿತ ಹಾಕಿದ್ದರು.

ಲೋಕಸಭೆಯ 145 ಮತ್ತು ರಾಜ್ಯಸಭೆಯ 63 ಸಂಸದರು ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಕೋರಿ ಲೋಕಸಭೆಯ ಸ್ಪೀಕರ್‌ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರಿಗೆ ನೋಟಿಸ್‌ ನೀಡಿದ್ದರು. ರಾಜ್ಯಸಭೆಯ ಸ್ಪೀಕರ್‌ ಜಗದೀಪ್‌ ಧನಕರ್‌ ಅವರಿಗೆ ಸಲ್ಲಿಕೆಯಾದ ಪತ್ರಕ್ಕೆ AAP ಮತ್ತು ಇಂಡಿಯಾ ಕೂಟದ ನಾಯಕರು ಸೇರಿದಂತೆ 63 ರಾಜ್ಯಸಭಾ ಸದಸ್ಯರು ಅಂಕಿತ ಹಾಕಿದ್ದರು.

ಸಂವಿಧಾನದ 124, 217 ಮತ್ತು 218 ನೇ ವಿಧಿಗಳ ಅಡಿಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಿದ್ದರು. ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ವಿರುದ್ಧದ ಮಹಾಭಿಯೋಗ ಪ್ರಸ್ತಾವನೆಯನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ಪಕ್ಷ ಈ ಹಿಂದೆ ಹೇಳಿತ್ತು.

ಏಪ್ರಿಲ್ 8 ರ ರಾತ್ರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಣನೀಯ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿತ್ತು. ನಂತರ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವ ಆಯ್ಕೆಯನ್ನು ಸುಪ್ರೀಂ ಕೋರ್ಟ್ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X