ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕುರಿತು ಅರಿವು ಮೂಡಿಸುವ ಶಿಬಿರವನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಗಿತ್ತು. ಇದೇ ವೇಳೆ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಹಾಗೂ ಮೋಟಾರು ಸಾರಿಗೆ ಮಂಡಳಿ ಯೋಜನೆಯ ಅಡಿ ನೋಂದಣಿ ಕುರಿತು ಮಾಹಿತಿ ಶಿಬಿರ ನಡೆಸಲಾಯಿತು.
ಸಮಾಜದ ಅತಿ ದೊಡ್ಡ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯಿಂದ ಸಮಾಜದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರು ಎದುರಿಸಬಹುದಾದ ಆಪತ್ತುಗಳ ಬಗ್ಗೆ ವಿವರವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕಾರ್ಮಿಕ ಇಲಾಖೆಯ ಎಲ್ಲ ಯೋಜನೆಗಳಡಿ ದೊರಕುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ನೋಂದಣಿ ಮಾಡಿಕೊಳ್ಳಲು ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರಿಗೆ ತಿಳಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ
ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಡಿ.ರಾಜಣ್ಣ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಲ್ತಾಫ್ ಅಹಮದ್, ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ, ಅಸಂಘಟಿತ ವಿಭಾಗದ ಹಿರೇಮಠ, ಆಶ್ರಿತ ಸಂಸ್ಥೆಯ ಹರ್ಷವರ್ಧನ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
https://shorturl.fm/iRWdn