ದಾವಣಗೆರೆ | ಹರಿಹರದಲ್ಲಿ ಜನರೊಂದಿಗೆ ಜನತಾದಳ- ಸದಸ್ಯತ್ವ ನೋಂದಣಿ ಅಭಿಯಾನ, 50 ನೇ ವಿಧಾನಸಭಾ ಕ್ಷೇತ್ರ

Date:

Advertisements

ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ 50 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ಮುಗಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರದ ಭಾಗೀರಥಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸವು 50 ವಿಧಾನಸಭಾ ಕ್ಷೇತ್ರದಲ್ಲಿ ಯಶಸ್ವಿಯಾಗಿ ಸಾಗಿದೆ. ಇದು ಕೇವಲ ಒಂದು ದಿನದ ಕಾರ್ಯಕ್ರಮ ಆಗಬಾರದು. ವೇದಿಕೆ ಮೇಲೆ ನಿಂತು ಭಾಷಣ ಮಾಡಿ ಹೋದ್ರೆ ಪಕ್ಷ ಸಂಘಟನೆ ಆಗಲ್ಲ. ನಾವು ಹೋದ ಬಳಿಕ ನೀವು ಎಷ್ಟು ಸಂಕಲ್ಪ ತೊಟ್ಟಿದ್ದೀರಾ ಅನ್ನೋದು ಮುಖ್ಯ” ಎಂದು ಅಭಿಪ್ರಾಯಪಟ್ಟರು.

“ಜೆಡಿಎಸ್ ಮತ್ತು ಬಿಜೆಪಿ ಜೊತೆ ಮೈತ್ರಿ ಗಟ್ಟಿಯಾಗಿದೆ ಸ್ಥಳೀಯ ಚುನಾವಣೆಗಳಲ್ಲೂ ಅದು ಮುಂದುವರಿಯುತ್ತದೆ. ಡಿಸೆಂಬರ್ ಜನವರಿಯಲ್ಲಿ ಗ್ರಾ.ಪಂ. ತಾ.‌ಪಂ. ಜಿ.ಪಂ. ಚುನಾವಣೆ ಇರಲಿದ್ದು, ಪಕ್ಷ ಗಟ್ಟಿ ಮಾಡಬೇಕಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು. ಪಕ್ಷ ಕಾರ್ಯಕರ್ತರ ಜೊತೆ ಇದೆ. ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಲು ಸದಸ್ಯತ್ವ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. 50 ಲಕ್ಷ ಸದಸ್ಯತ್ವ ಟಾರ್ಗೆಟ್ ಇಟ್ಟು ಕೊಂಡಿದ್ದೇವೆ” ಎಂದು ಕಾರ್ಯಕರ್ತರಿಗೆ ತಿಳಿಸಿದರು.

“ಎರಡು ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಸರ್ಕಾರದ ಸಾಧನೆ ಸಂಪೂರ್ಣ ಶೂನ್ಯ. ಅಭಿವೃದ್ಧಿ ಅನ್ನೋದು ಸಂಪೂರ್ಣ ಕುಸಿದು ಹೋಗಿದೆ. ಅವರ ಪಕ್ಷದ ಶಾಸಕರೇ ಅಸಹಾಯಕತೆ ಹೊರ ಹಾಕಿದ್ದಾರೆ. ಹಿರಿಯ ಶಾಸಕರುಗಳೇ ಯಾವ ರೀತಿ ಮಾತನಾಡಿದ್ದಾರೆ ಎಂದು ನಾವು ನೀವು ನೋಡಿದ್ದೇವೆ” ಎಂದು ಕಿಡಿಕಾರಿದರು.

“ಜನರೊಂದಿಗೆ ಜನತಾದಳ ಒಂದೂವರೆ ತಿಂಗಳಿಂದ ಹಲವು ಜಿಲ್ಲೆ ತಾಲೂಕುಗಳಿಗೆ ಭೇಟಿ ನೀಡುತಿದ್ದೇನೆ. ಒಂಬತ್ತು ದಿನಗಳ ಕಾಲ ಅಧಿವೇಶನ ಇರುವ ಹಿನ್ನೆಲೆಯಲ್ಲಿ ಆ.22 ರಿಂದ ಮತ್ತೆ ಅಭಿಯಾನ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

Advertisements

“ಪಂಚಾಯತಿ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಅಭ್ಯರ್ಥಿಗಳ ನೇತೃತ್ವದಲ್ಲಿ ಗ್ರೌಂಡ್‌ಗೆ ಇಳಿದು ಕೆಲಸ ಮಾಡಬೇಕು. ದೇವೇಗೌಡರ ಸೂಚನೆ ಹಾಗೂ ಕುಮಾರಸ್ವಾಮಿಯವರ ಮಾರ್ಗದರ್ಶನ ಇದೆ. ಮುಂಬರುವ ದಿನಗಳಲ್ಲಿ ಜನತಾದಳ ಪಕ್ಷವನ್ನು ಕಾರ್ಯಕರ್ತರ ಸಹಕಾರದಿಂದ ಕೇಡರ್‌ಬೇಸ್ ಪಾರ್ಟಿಯಾಗಿ ಕಟ್ಟ್ತೀವಿ. ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಬಗ್ಗೆ ದೊಡ್ಡ ಸಮಾವೇಶ ಮಾಡುತ್ತೇವೆ” ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದರು.


“ರೈತರು ರಸಗೊಬ್ಬರ ವಿಚಾರದಲ್ಲಿ ಸಂಕಷ್ಟದಲ್ಲಿದ್ದಾರೆ. ರಾಜ್ಯದ ಕೃಷಿ ಮಂತ್ರಿಗಳು ಕೇಂದ್ರದ ಕೃಷಿ ಮಂತ್ರಿ ಮೇಲೆ ಆಪಾದನೆ ಮಾಡಿದ್ರು. ಕೇಂದ್ರ ಸರ್ಕಾರ ಸಮರ್ಪಕ ರಸಗೊಬ್ಬರ ಪೂರೈಕೆ ಮಾಡಿಲ್ಲ ಅಂತ. ಅದರ ಸಂಪೂರ್ಣ ವಿವರ ಪಡೆದಿದ್ದೇನೆ, ಇನ್ನೆರಡು ದಿನಗಳಲ್ಲಿ ಸುದ್ದಿಗೋಷ್ಟಿ ಮಾಡುವೆ ಪ್ರಾಮಾಣಿಕವಾಗಿ ರೈತರ ಪರ ಕೆಲಸ ಮಾಡಿದ ಪಕ್ಷ ಜನತಾದಳ ಪಕ್ಷ. 9 ದಿನಗಳ ಅಧಿವೇಶನದಲ್ಲಿ ಜೆಡಿಎಸ್ ಶಾಸಕರು ವಿಧಾನ ಮಂಡಲದಲ್ಲಿ ಚರ್ಚೆ ಮಾಡುವ ವಿಚಾರಗಳ ಬಗ್ಗೆ ಹೆಚ್‌ಡಿಕೆ ಜೊತೆ ಚರ್ಚೆ ನಡೆಸಿದ್ದಾರೆ. ರಸಗೊಬ್ಬರವನ್ನ ರೈತರಿಗೆ ಮುಟ್ಟಿಸಲು ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಕಾರ್ಯಕ್ರಮಕ್ಕೂ ಮೊದಲು ದಕ್ಷಿಣದ ಕಾಶಿ ಎಂದೇ ಹೆಸರಾಗಿರುವ ಹರಿಹರದ ಶ್ರೀ ಹರಿಹರೇಶ್ವರ ದೇವಾಲಯಕ್ಕೆ ತೆರಳಿ ಶ್ರೀ ಹರಿಹರೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡರು. ಕಾರ್ಯಕರ್ತರ ಜೊತೆಗೂಡಿ ಬೈಕ್ ಜಾಥ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ , ಹರಿಹರದ ಮಾಜಿ ಶಾಸಕ ಎಚ್ ಎಸ್ ಶಿವಶಂಕರ, ಮಾಜಿ ಶಾಸಕರಾದ ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕ್, ಮಾಜಿ ವಿಧಾನಪರಿಷತ್ ಸದಸ್ಯರಾದ ಆರ್. ಚೌಡರೆಡ್ಡಿ, ಜಿಲ್ಲಾಧ್ಯಕ್ಷರಾದ  ಬಿ. ಚಿದಾನಂದ, ಮಹಿಳಾ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ ಅವರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X