ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಪಟ್ಟಣ ಪಂಚಾಯಿತಿಯಲ್ಲಿ ನಡೆದಿದೆ.
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಕಾಂತ್ ಎಂಬುವರು ದೇಸಾಯಿ ಎಂಬ ಗುತ್ತಿಗೆದಾರರಿಂದ 7.50 ಲಕ್ಷ ರೂ. ವೆಚ್ಚದ ಕಾಮಗಾರಿ ಬಿಲ್ ಮಂಜೂರಾತಿಗಾಗಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. 50 ಸಾವಿರ ರೂ. ಲಂಚ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ಸಮಯಕ್ಕೆ ಸರಿಯಾಗಿ ದಾಳಿ ಮಾಡಿದ್ದರಿಂದ ಅಧಿಕಾರಿ ಸಿಕ್ಕಿ ಬಿದ್ದಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಾರ್ಮಾಡಿ ಘಾಟ್: ಪ್ರಪಾತಕ್ಕೆ ಕಾಲು ಜಾರಿ ಯುವಕ ಗಂಭೀರ
ಈ ಘಟನೆ ಕುರಿತು ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ಮಾಡಿಲಾಗಿದ್ದು, ಸದ್ಯ ಚಂದ್ರಕಾಂತ್ ನನ್ನ ವಶಕ್ಕೆ ಪಡೆಯಲಾಗಿದೆ.