ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಭೇದಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ.
ಕಳ್ಳತನ ಮಾಡಿದ್ದ ₹17.50 ಲಕ್ಷ ಮೌಲ್ಯದ 195.9 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 10ರಂದು, ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳತನ ನಡೆಸಿದ್ದ ಆರೋಪಿ ಕಾರ್ಪೆಂಟರ್ ವಿರೂಪಾಕ್ಷ ಕೆ.ಎನ್ ಬಂಧಿಸಿ ವಿಚಾರಣೆ ನಡೆಸಿದಾಗ ಚಿನ್ನಾಭರಣ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಈ ಹಿಂದೆಯೂ ಈತನ ವಿರುದ್ದ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಈ ಕುರಿತು ಪ್ರಕರಣದ ತನಿಖೆಗೆ ಎಸ್ಪಿ ಡಾ. ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಎಸ್ ಪಿ ಜಯಕುಮಾರ್, ತರೀಕೆರೆ ಉಪವಿಭಾಗದ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಅವರ ಮೇಲ್ವಿಚಾರಣೆಯಲ್ಲಿ, ಕಡೂರು ವೃತ್ತ ನಿರೀಕ್ಷಕ ರಫೀಕ್ ಎಂ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು..ಪಿಎಸ್‌ಐ ಸಜಿತ್ ಕುಮಾರ್ ಹಾಗೂ ಠಾಣೆಯ ಸಿಬ್ಬಂದಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಆರೋಪಿಯಿಂದ ಕಳವು ಮಾಡಿದ್ದ 195.9 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಭೇದಿಸಿದ ಪೊಲೀಸರ ತಂಡಕ್ಕೆ ಎಸ್ಪಿ ವಿಕ್ರಮ್ ಅಮಟೆಯವರು ಶ್ಲಾಘಿಸಿ, ಬಹುಮಾನ ಘೋಷಿಸಿದ್ದಾರೆ.
https://shorturl.fm/GGkP5
https://shorturl.fm/bYAoD
https://shorturl.fm/LwLmU