ಭೀಕರ ಅಪಘಾತ ಸಂಭವಿಸಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಪಿಕಪ್ ವ್ಯಾನ್ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಖಾತು ಶ್ಯಾಮ್ ಮತ್ತು ಸಲಸರ್ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಉತ್ತರ ಪ್ರದೇಶದ ಇಟಾದಲ್ಲಿರುವ ತಮ್ಮ ಗ್ರಾಮಕ್ಕೆ ಪಿಕಪ್ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ಬೆಳಿಗ್ಗೆ 4-5 ಗಂಟೆ ಸುಮಾರಿಗೆ ಮನೋಹರ್‌ಪುರ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ.
ಇದನ್ನು ಓದಿದ್ದೀರಾ? ರಾಜಸ್ಥಾನ | ಆಟೋ-ಬಸ್ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ
ಮೃತರಲ್ಲಿ ಏಳು ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಸಾಗರ್ ರಾಣಾ ತಿಳಿಸಿದ್ದಾರೆ.
ಹೆದ್ದಾರಿಯ ಸರ್ವಿಸ್ ಲೇನ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪಿಕಪ್ ವಾಹನದಲ್ಲಿ 25 ಮಂದಿ ಇದ್ದರು. ಎಂಟು ಮಂದಿ ಗಾಯಗೊಂಡಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.
