ರಾಯಚೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದ ಹೊರವಲಯದಲ್ಲಿ ಲಾರಿ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಗುಂಜಳ್ಳಿ ಗ್ರಾಮದ ಖಾಜಾಸಾಬ್ (32) ಎಂದು ಗುರುತಿಸಲಾಗಿದೆ. ವೈಯಕ್ತಿಕ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಮರಳುತ್ತಿದ್ದ ವೇಳೆ, ಎದುರುಗಡೆಯಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ, ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಖಾಜಾಸಾಬ್ ಅವರಿಗೆ ಇಬ್ಬರು ಮಕ್ಕಳು ಇದ್ದು, ಅವರ ಸಾವಿನಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಮಹಿಳೆ ಸಾವು
ಈ ಕುರಿತು ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
