ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಮಾರ್ಚ್ 4ರಂದು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಸುಶೀಲ್ ಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಇದನ್ನು ಓದಿದ್ದೀರಾ? ಭಾರತದ 124 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಹಲವು ದಾಖಲೆಗಳನ್ನು ಬರೆದ ಮನು ಭಾಕರ್
ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಾಗರ್ ಅವರ ತಂದೆ ಅರ್ಜಿಯನ್ನು ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ಅಂಗೀಕರಿಸಿದೆ. ಹಾಗೆಯೇ ಒಂದು ವಾರದೊಳಗೆ ಶರಣಾಗುವಂತೆ ನ್ಯಾಯಾಧೀಶರು ಸುಶೀಲ್ ಕುಮಾರ್ ಅವರಿಗೆ ಆದೇಶಿಸಿದ್ದಾರೆ.
#BREAKING #SupremeCourt cancels the bail of Olympian wrestler Sushil Kumar in the Sagar Dhankhar murder case.
— Live Law (@LiveLawIndia) August 13, 2025
SC direccts him to surrender within a week.
#SupremeCourt pic.twitter.com/v9lZvnmr4Z
ಮೃತರ ತಂದೆ ಅಶೋಕ್ ಧಂಕಾಡ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಮೃದುಲ್ ವಾದ ಮಂಡಿಸಿದ್ದು, ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಅವರು ಉನ್ನತ ನ್ಯಾಯಾಲಯದಲ್ಲಿ ಕುಮಾರ್ ಪರವಾಗಿ ವಾದ ಮಂಡಿಸಿದರು.
2021ರ ಮೇ 4ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದ ಪಾರ್ಕಿಂಗ್ ಸ್ಥಳದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು ಈ ವೇಳೆ ಸುಶೀಲ್ ಕುಮಾರ್ ಮತ್ತು ಇತರ ಹಲವರು ಧನಕರ್ ಮತ್ತು ಸೋನು, ಅಮಿತ್ ಕುಮಾರ್ ಎಂಬ ಅವರ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಸಾಗರ್ ಮೃತಪಟ್ಟಿದ್ದಾರೆ.
