ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

Date:

Advertisements

“ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ ಇಲ್ಲ. ಆದ್ರೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆಗಳು ಸಿಗುವುದು ಕಡಿಮೆ. ಉತ್ತಮ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ ಮಾಡಲು, ಸಾಮರ್ಥ್ಯ ತೋರಿಸಲು ಕಷ್ಟವಾಗದು” ಎಂದು ಜವಾಹರ್ ಬಾಲ್ ಮಂಚ್ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟರು.

ಜವಾಹರ್ ಬಾಲ್ ಮಂಚ್ ವತಿಯಿಂದ ದಾವಣಗೆರೆ ನಗರದ ನಿಟುವಳ್ಳಿಯ ಇಎಸ್ಐ ಆಸ್ಪತ್ರೆ ಎದುರುಗಡೆ ಇರುವ ಸರ್ಕಾರಿ ಶಾಲೆಗೆ ಕ್ರೀಡಾ ಸಾಮಗ್ರಿ ಹಾಗೂ ವಿದ್ಯಾರ್ಥಿಗಳಿಗೆ ಟೀ ಶರ್ಟ್ ವಿತರಿಸಿದ ಬಳಿಕ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,  “ಇಂದು ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ. ಆದರೆ, ನಿಟುವಳ್ಳಿಯ ಸರ್ಕಾರಿ ಶಾಲೆ ಇದಕ್ಕೆ ತದ್ವಿರುದ್ಧವಾಗಿ ಉತ್ತಮವಾಗಿ ನಡೆಯುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಿದೆ. ಮೂಲಭೂತ ಸೌಲಭ್ಯ ಇನ್ನೂ ಹೆಚ್ಚಿನ ರೀತಿಯಲ್ಲಿ ಸಿಗುವಂತಾಗಬೇಕು” ಎಂದು ಹೇಳಿದರು.

“ಪಠ್ಯ ಮಾತ್ರವಲ್ಲ, ಪಠ್ಯೇತರ ಚಟುವಟಿಕೆಗಳಿಗೂ ಸೂಕ್ತ ಸೌಲಭ್ಯಗಳು ಸಿಗಬೇಕಿದೆ. ಖಾಸಗಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗಿಂತ ಕ್ರೀಡಾ ಚಟುವಟಿಕೆಗಳಲ್ಲಿ ಯಾವಾಗಲೂ ಸರ್ಕಾರಿ ಶಾಲೆಗಳ ಮಕ್ಕಳೇ ಮುಂದಿರುತ್ತಾರೆ. ಹಾಗಾಗಿ, ಶಾಲೆಗೆ ಕ್ರೀಡಾ ಸಾಮಗ್ರಿ ಮತ್ತು ವಿದ್ಯಾರ್ಥಿಗಳಿಗೆ ಟೀ ಶರ್ಟ್ ವಿತರಿಸಲಾಗುತ್ತಿದೆ. ಈ ಶಾಲೆಯಲ್ಲಿ ಬಡವರು, ಮಧ್ಯಮ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಲ್ಲಿ ಓದಿದವರು ಹೆಚ್ಚಿನ ಸಾಧನೆ ಮಾಡಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಮಿನುಗುವ ನಕ್ಷತ್ರಗಳಾಗಲಿ ಎಂಬ ಆಶಯದಿಂದ ನಾವು ಟೀ ಶರ್ಟ್ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದ್ದೇವೆ. ಶಾಲೆಗೆ ಕ್ರೀಡಾ ಸಾಮಗ್ರಿ ಮತ್ತು ವಿದ್ಯಾರ್ಥಿಗಳಿಗೆ ಟೀ ಶರ್ಟ್ ನೀಡುವಂತೆ ದೈಹಿಕ ಶಿಕ್ಷಕರಾದ ದೇವರಾಜ್ ಅವರು ಮನವಿ ಮಾಡಿದ ಮೇರೆಗೆ ಕೈಯಲ್ಲಾದಷ್ಟು ಸಹಾಯ ಮಾಡಿದ್ದೇವೆ” ಎಂದು ತಿಳಿಸಿದರು.

Advertisements
1002496370

“ಸರ್ಕಾರಿ ಶಾಲೆಗಳು ಎಂದರೆ ಮೂಗು ಮುರಿಯುವ ಇಂದಿನ ದಿನಗಳಲ್ಲಿ ಈ ಶಾಲೆ ನೋಡಿದರೆ ಖುಷಿಯಾಗುತ್ತದೆ. ಇಷ್ಟೊಂದು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿದ್ದಾರೆ. ಇಲ್ಲಿ ಓದಿದವರು ಉನ್ನತ ಸ್ಥಾನಕ್ಕೆ ಹೋಗಿದ್ದಾರೆ. ಇಂಥ ಶಾಲೆಗಳು ಉಳಿಯುವಂತಾಗಬೇಕು. ಈ ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳು ತಮ್ಮ ಕೈಯಲ್ಲಾದಷ್ಟು ಸಹಾಯ ಮಾಡಿದರೆ ಶಾಲೆ ಮತ್ತಷ್ಟು ಉನ್ನತಿ ಹೊಂದುವುದರಲ್ಲಿ ಸಂಶಯವಿಲ್ಲ” ಎಂದು ಅಭಿಪ್ರಾಯಪಟ್ಟರು.

ಡಿಡಿಪಿಐ ಕೊಟ್ರೇಶ್ ಮಾತನಾಡಿ, “ಸರ್ಕಾರಿ ಶಾಲೆಯ ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳ ಅನುಕೂಲಕ್ಕೆ ಸಹಾಯ ಮಾಡಿರುವುದು ತುಂಬಾ ಒಳ್ಳೆಯ ಕೆಲಸ. ಕ್ರೀಡಾ ಸಾಮಗ್ರಿಗಳು ಸಿಕ್ಕರೆ ಮಕ್ಕಳು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಲು ಸಾಧ್ಯವಾಗುತ್ತದೆ. ಟೂರ್ನಿಮೆಂಟ್ ನಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಜವಾಹರ್ ಬಾಲ್ ಮಂಚ್ ನ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ನೇತೃತ್ವದಲ್ಲಿ ನೀಡಿರುವುದು ಮತ್ತೊಬ್ಬರಿಗೆ ಸ್ಫೂರ್ತಿ ತರುವುದಾಗಿದೆ” ಎಂದು ಪ್ರಶಂಸಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಾಲಕಾರ್ಮಿಕ ಪದ್ಧತಿ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಕುರಿತು ಶಿಬಿರ

ದಾವಣಗೆರೆ ದಕ್ಷಿಣ ಬಿಇಒ ಪುಷ್ಪಲತಾ, ಜವಾಹರ್ ಬಾಲ್ ಮಂಚ್ ಪದಾಧಿಕಾರಿಗಳಾದ ಕೆ. ಹೆಚ್. ಪ್ರೇಮಾ, ನಾಗರಾಜ್, ಫಯಾಜ್ ಅಹ್ಮದ್, ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್, ದೈಹಿಕ ಶಿಕ್ಷಕ ದೇವರಾಜ್, ಜಯಪ್ಪ, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಬೋಧಕೇತರ ಸಿಬ್ಬಂದಿ ಸಮಾರಂಭದಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ...

Download Eedina App Android / iOS

X