ತಮಿಳರ ವಿರೋಧಿ ಆರೋಪ: ರಾಜ್ಯಪಾಲರ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!

Date:

Advertisements

ತಮಿಳುನಾಡಿನ ವಿಶ್ವವಿದ್ಯಾಲಯವೊಂದರ ಸಂಶೋಧನಾ ವಿದ್ಯಾರ್ಥಿನಿಯೋರ್ವರು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರ ಕೈಯಿಂದ ಪದವಿ ಪ್ರಮಾಣ ಪತ್ರವನ್ನು ಸ್ವೀಕರಿಸಲು ನಿರಾಕರಿಸಿರುವ ಘಟನೆ ತಿರುನಲ್ವೇಲಿಯಲ್ಲಿ ನಡೆದಿರುವುದಾಗಿ ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ತಿರುನಲ್ವೇಲಿಯ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ ಜೀನ್ ಜೋಸೆಫ್ ಎಂಬ ಪಿಎಚ್‌ಡಿ ವಿದ್ಯಾರ್ಥಿನಿ ರಾಜ್ಯಪಾಲರಿಂದ ಪದವಿ ಪಡೆಯಲು ನಿರಾಕರಿಸಿದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ರಾಜ್ಯಪಾಲರಿಂದ ಪ್ರಮಾಣ ಪತ್ರ ಸ್ವೀಕರಿಸಲು ನಿರಾಕರಿಸಿದ ಬಳಿಕ ವಿಶ್ವವಿದ್ಯಾಲಯದ ಉಪಕುಲಪತಿ ಎಂ ಚಂದ್ರಶೇಖರ್ ಅವರಿಂದ ಪದವಿ ಪಡೆದಿರುವುದಾಗಿ ವರದಿ ತಿಳಿಸಿದೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಈ ಬೆಳವಣಿಗೆಯ ಬಳಿಕ ಮಾತನಾಡಿರುವ ಪಿಎಚ್‌ಡಿ ವಿದ್ಯಾರ್ಥಿನಿ ಜೀನ್ ಜೋಸೆಫ್, “ರಾಜ್ಯಪಾಲ ಆರ್ ಎನ್ ರವಿ ತಮಿಳರು ಮತ್ತು ತಮಿಳುನಾಡು ವಿರೋಧಿ. ಹಾಗಾಗಿ, ಅವರ ಕೈಯಿಂದ ಪದವಿ ಪ್ರಮಾಣಪತ್ರ ಸ್ವೀಕರಿಸದಿರಲು ಮೊದಲೇ ನಿರ್ಧರಿಸಿದ್ದೆ. ಹಾಗಾಗಿ, ಅವರ ಎದುರಲ್ಲೇ ನನ್ನ ಪ್ರತಿಭಟನೆ ದಾಖಲಿಸಿ, ನಮ್ಮದೇ ವಿವಿಯ ಉಪಕುಲಪತಿ ಎಂ ಚಂದ್ರಶೇಖರ್ ಅವರಿಂದ ಪದವಿ ಪ್ರಮಾಣ ಪತ್ರ ಪಡೆದಿದ್ದೇನೆ” ಎಂದು ತಿಳಿಸಿದ್ದಾರೆ.

Advertisements

ಪಿಎಚ್‌ಡಿ ವಿದ್ಯಾರ್ಥಿನಿ ಜೀನ್ ಜೋಸೆಫ್ ಡಿಎಂಕೆ ನಾಗರಕೋಯಿಲ್ ಕಾರ್ಪೊರೇಷನ್ ಉಪ ಕಾರ್ಯದರ್ಶಿ ಎಂ ರಾಜನ್ ಅವರ ಪತ್ನಿ ಎಂದು ತಿಳಿದುಬಂದಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರನ್ನು ನಿರ್ಲಕ್ಷ್ಯಿಸಲು ಮೊದಲೇ ಯೋಜಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ವಿಡಿಯೋದಲ್ಲಿ ವಿದ್ಯಾರ್ಥಿನಿ ಜೀನ್ ಜೋಸೆಫ್ ಅವರು ರಾಜ್ಯಪಾಲರನ್ನು ನಿರ್ಲಕ್ಷ್ಯಿಸಿರುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ತಿರುನಲ್ವೇಲಿಯಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಗೋವಿ ಚೆಝಿಯಾನ್ ಕೂಡ ಭಾಗವಹಿಸಿರಲಿಲ್ಲ. ‘ಆಡಳಿತಾತ್ಮಕ ಬದ್ಧತೆಗಳ’ ಕಾರಣದಿಂದಾಗಿ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ ಎಂದು ಉಪಕುಲಪತಿ ಎನ್ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.

ರಾಜ್ಯಪಾಲ- ತಮಿಳುನಾಡು ಸರ್ಕಾರದ ನಡುವಿನ ಸಂಘರ್ಷ

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಮತ್ತು ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಡಿಎಂಕೆ ಸರ್ಕಾರದ ನಡುವಿನ ಸಂಘರ್ಷವು ಹಲವಾರು ಕಾರಣಗಳಿಂದಾಗಿ ದೇಶದ ಗಮನ ಸೆಳೆದಿದೆ.

ರಾಜ್ಯಪಾಲ ಆರ್.ಎನ್. ರವಿ ಮಧುರೈನ ಒಂದು ಎಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ‘ಕಂಬ ರಾಮಾಯಣಂ’ ಕವಿಯ ಗೌರವಕ್ಕಾಗಿ ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಕೇಳಿಕೊಂಡಿದ್ದರು. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೂ ಕಾರಣವಾಗಿತ್ತು. ಡಿಎಂಕೆ, ಕಾಂಗ್ರೆಸ್, ಮತ್ತು ಇತರ ಪ್ರತಿಪಕ್ಷಗಳು ಇದನ್ನು ಸಂವಿಧಾನದ ಜಾತ್ಯತೀತ ತತ್ವಗಳಿಗೆ ವಿರುದ್ಧವೆಂದು ಟೀಕಿಸಿದ್ದವು. ರವಿ ಅವರನ್ನು ಗವರ್ನರ್ ಹುದ್ದೆಯಿಂದ ತೆಗೆದುಹಾಕುವಂತೆಯೂ ಆಗ್ರಹಿಸಿದ್ದರು.

ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ರಾಷ್ಟ್ರಗೀತೆಯನ್ನು ಆರಂಭದಲ್ಲಿ ಮತ್ತು ಕೊನೆಯಲ್ಲಿ ಹಾಡಬೇಕೆಂದು ರವಿ ಸಲಹೆ ನೀಡಿದ್ದರು. ಆದರೆ, ಸರ್ಕಾರವು ಈ ಸಲಹೆಯನ್ನು ತಿರಸ್ಕರಿಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ರವಿ ಸಾಂಪ್ರದಾಯಿಕ ಭಾಷಣವನ್ನು ಓದದೆ ಸದನದಿಂದ ಹೊರನಡೆಯುವ ಮೂಲಕ ಸುದ್ದಿಯಾಗಿದ್ದರು.

ಇದನ್ನು ಓದಿದ್ದೀರಾ? ಮತಗಳ್ಳತನ | ಕಿರುಚಿತ್ರ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ರವಿ ಅವರು ತಮಿಳುನಾಡಿನ ಬದಲಿಗೆ ‘ತಮಿಳಗಂ’ ಎಂಬ ಹೆಸರನ್ನು ಬಳಸಿದ್ದಕ್ಕಾಗಿಯೂ ವಿವಾದ ಉಂಟಾಗಿತ್ತು, ಇದನ್ನು ಸ್ಟಾಲಿನ್ ಸರ್ಕಾರವು ರಾಜ್ಯದ ಗುರುತಿಗೆ ಅವಮಾನ ಎಂದು ಟೀಕಿಸಿತ್ತು. ರಾಜ್ಯಪಾಲರ ಈ ರೀತಿಯ ಹಲವು ನಡೆಗಳು ರಾಜಕೀಯವಾಗಿ ತಮಿಳುನಾಡಿನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X