ತುಮಕೂರು | ರಾಜಣ್ಣಗೆ ಮತ್ತೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Date:

Advertisements

ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕಾಂಗ್ರೆಸ್ ಹೈಕಮಾಂಡ್ ಕ್ರಮ ಖಂಡಿಸಿ ಕಲ್ಪತರುನಾಡು ತುಮಕೂರಿನಲ್ಲಿ ಆಕ್ರೋಶ ಭುಗಿಲೆದಿದ್ದು, ಕೆ.ಎನ್. ರಾಜಣ್ಣನವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕೆ.ಎನ್.ಆರ್. ಅಭಿಮಾನಿಗಳು, ವಾಲ್ಮೀಕಿ ಸಮುದಾಯದವರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ವಿವಿಧ ಸಂಘಟನೆಗಳು ಮುಖಂಡರು ಪ್ರತಿಭಟನೆ ನಡೆಸಿದರು. 

ಕೆ.ಎನ್.ಆರ್, ಆರ್.ಆರ್. ಅಭಿಮಾನಿ ಬಳಗ, ಕಾಂಗ್ರೆಸ್ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ತುಮಕೂರು ನಗರದ ಟೌನ್‌ಹಾಲ್ ವೃತ್ತ ಜಮಾಯಿಸಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಯಾವುದೇ ತಪ್ಪು ಮಾಡದ ಕೆ.ಎನ್.ರಾಜಣ್ಣನವರನ್ನು ಸಂಪುಟದಿಂದ ವಜಾ ಮಾಡಿ ಅಪಮಾನ ಮಾಡಲಾಗಿದೆ ಎಂದು ಆಕ್ರೋಶ ಹೊರ ಹಾಕಿದರು.

1001888064

ಟೌನ್‌ಹಾಲ್ ವೃತ್ತದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದ ಕೆಎನ್‌ಆರ್ ಅಭಿಮಾನಿಗಳು, ಮಧುಗಿರಿ ಕ್ಷೇತ್ರದ ಕಾರ್ಯಕರ್ತರು ಕೆಎನ್‌ಆರ್ ಪರ ಘೋಷಣೆಗಳನ್ನು ಕೂಗುತ್ತಾ ಬಿ.ಹೆಚ್. ರಸ್ತೆ ಮುಖೇನ ಎಂ.ಜಿ. ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 

Advertisements

ಮುಖಂಡ ಗಂಗಣ್ಣ ಮಾತನಾಡಿ, ಕೆ.ಎನ್. ರಾಜಣ್ಣ ಅವರು ಸಂಪುಟದಿಂದ ವಜಾ ಮಾಡಿರುವುದು ತುಮಕೂರು ಜಿಲ್ಲೆಯ ಅಹಿಂದ ವರ್ಗದವರಿಗೆ ತುಂಬಾ ನೋವಾಗಿದೆ. ಮತ್ತೆ ರಾಜಣ್ಣನವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಈ ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲವಾಗುತ್ತದೆ. ಇದಕ್ಕೆ ಅವಕಾಶ ನೀಡದೆ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ರಾಜಣ್ಣನವರನ್ನು ವಜಾ ಮಾಡಿರುವುದನ್ನು ವಾಪಸ್ ಪಡೆದು ಮತ್ತೆ ಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.

1001888078

1968 ರಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡು, ಅಸಹಾಯಕರಿಗೆ ಸಹಾಯ ಮಾಡುತ್ತಾ ಜನಪರ ನಾಯಕರಾಗಿ ಬೆಳೆದ ಕೆ.ಎನ್.ರಾಜಣ್ಣನವರನ್ನು ತುಮಕೂರು ಜಿಲ್ಲೆಯ ದೇವರಾಜ ಅರಸು ಎಂದು ಜನ ಗುರುತಿಸಿ ಗೌರವಿಸುತ್ತಾರೆ. ಸರ್ಕಾರದ ಅಭಿವೃದ್ಧಿ ಕೆಲಸಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇಂತಹ ನಾಯಕನನ್ನು ಸಚಿವ ಸ್ಥಾನದಿಂದ ತೆಗೆದು ಅವಮಾನ ಮಾಡಿರುವುದು ಜಿಲ್ಲೆಯ ಅವರ ಅಭಿಮಾನಿಗಳಿಗೆ ನೋವಾಗಿದೆ ಎಂದು ಪ್ರತಿಭಟನಾನಿರತರು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ 7 ಸ್ಥಾನ ಗಳಿಸಲು ಕೆ.ಎನ್.ಆರ್ ಕೊಡುಗೆ ಇದೆ. 30 ವರ್ಷಗಳಿಂದ ಕಾಂಗ್ರೆಸ್ ಗೆಲುವು ಸಾಧ್ಯವಾಗದ ಹಾಸನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಪಡೆಯಲು ಅಲ್ಲಿನ ಉಸ್ತುವಾರಿ ಸಚಿವರಾಗಿದ್ದ ಕೆ.ಎನ್.ರಾಜಣ್ಣನವರು ಪಕ್ಷ ನಿಷ್ಠೆ ಕಾರ್ಯತಂತ್ರ ಕಾರಣ ಎಂದರು.

1001887998

ಕೆ.ಎನ್.ರಾಜಣ್ಣನವರು 1968 ರಿಂದ ಎಲ್ಲಾ ಕಾಂಗ್ರೆಸ್ ನಾಯಕರ ಒಡನಾಡಿಯಾಗಿ ಪಕ್ಷವನ್ನು ಸದೃಢವಾಗಿ ಸಂಘಟಿಸಲು ಶ್ರಮಿಸಿದ್ದಾರೆ. ಅಶಕ್ತರಿಗೆ, ಶೋಷಿತರಿಗೆ ಧ್ವನಿಯಾಗಿ ನಿಂತು ಅವರಿಗೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಾ ಜನಾನುರಾಗಿಯಾಗಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ತೆಗೆದಿರುವುದು ಅವರ ಲಕ್ಷಾಂತರ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಂಡು ಅವರಿಗೆ ಮತ್ತೆ ಮಂತ್ರಿ ಸ್ಥಾನ ನೀಡಬೇಕು ಎಂದು ಕೆಎನ್‌ಆರ್ ಅಭಿಮಾನಿಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹೆತ್ತೇನಹಳ್ಳಿ ಮಂಜುನಾಥ್, ಕಲ್ಲಹಳ್ಳಿ ದೇವರಾಜು, ಎಸ್. ನಾಗಣ್ಣ, ಸಿಂಗನಹಳ್ಳಿ ರಾಜ್‌ಕುಮಾರ್, ವೆಂಕಟೇಗೌಡ, ಧನಿಯಕುಮಾರ್, ಪ್ರತಾಪ್ ಮದಕರಿ, ಪುರುಷೋತ್ತಮ್, ಟಿ.ಪಿ. ಮಂಜುನಾಥ್, ಲಕ್ಷ್ಮಿನಾರಾಯಣ್, ಕುಂದೂರು ತಿಮ್ಮಯ್ಯ, ಮಂಜೇಶ್, ಕುಪ್ಪೂರು ಶ್ರೀಧರ್, ಮುರುಳಿ ಕುಂದೂರು, ತಿಮ್ಮಣ್ಣ ಕುಂದೂರು, ಮಂಜುನಾಥ್, ನಾರಾಯಣಗೌಡ, ರಾಯಸಂದ್ರ ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಕೆಎನ್‌ಆರ್ ಅಭಿಮಾನಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಟೌನ್‌ಹಾಲ್ ಸರ್ಕಲ್, ಬಿ.ಹೆಚ್. ರಸ್ತೆ, ಎಂ.ಜಿ. ರಸ್ತೆಯ ಬದಿಗಳ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳನ್ನು ತೆರವುಗೊಳಿಸಿದ ಪೊಲೀಸರು ಯಾವುದೇ ಅಹಿತಕರ ಘಟನೆಗಳಾಗದಂತೆ ಬಿಗಿ ಭದ್ರತೆ ಕೈಗೊಂಡಿದ್ದರು.  

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X