2030ಕ್ಕೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

Date:

Advertisements

ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು, 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಕಾರ್ಯಸೂಚಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳ ಸವಾಲುಗಳ ಕುರಿತು ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಭಾರತದ ಉಕ್ಕು ವಲಯದ ಒಟ್ಟು ಉತ್ಪಾದನೆಯ ಶೇ.50ರಷ್ಟನ್ನು ಉತ್ಪಾದಿಸುತ್ತಿರುವ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದೆ ಎಂದ ಅವರು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಈ ವಲಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತಿದ್ದೇವೆ. ಸಣ್ಣ ಗಾತ್ರದ ಉಕ್ಕು ವಲಯವು ಕೇವಲ ಒಂದು ಉದ್ಯಮವಲ್ಲ. ಇದು ದೇಶಿಯ ಕೈಗಾರಿಕೀಕರಣದ ಬೆನ್ನೆಲು. ಇದು ಸ್ಥಳೀಯ ಆರ್ಥಿಕತೆಗೆ ಶಕ್ತಿ ನೀಡುತ್ತಿದೆ ಹಾಗೂ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತಿದೆ. ಸಮಗ್ರ ಬೆಳವಣಿಗೆಗೆ ಉತ್ತೇಜನ ನೀಡುತ್ತಿರುವುದು ಮಾತ್ರವಲ್ಲದೆ, ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಭಾರತವನ್ನು ಶೂನ್ಯ ಇಂಗಾಲ ಬಿಡುಗಡೆ ಹಾಗೂ ಉಕ್ಕು ವಲಯದಲ್ಲಿ ಜಾಗತಿಕ ಸುಸ್ಥಿರ ರಾಷ್ಟ್ರವನ್ನಾಗಿ ಹೊರಹೊಮ್ಮಿಸಲು ನಾವು ದೃಢನಿಶ್ಚಯ ಮಾಡಿದ್ದೇವೆ” ಎಂದು ಹೇಳಿದರು.

Advertisements

“2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್‌ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವುದು ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಹೆಗ್ಗುರಿ ಆಗಿದೆ. ಈ ಮೈಲಿಗಲ್ಲುಗಳನ್ನು ಸಾಧಿಸುವಲ್ಲಿ ಸಣ್ಣ ಗಾತ್ರದ ಉಕ್ಕು ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ವಿಶೇಷ ಉಕ್ಕಿಗಾಗಿ PLI ಯೋಜನೆ, ಹಸಿರು ಉಕ್ಕು ಪ್ರಮಾಣೀಕರಣ ರೇಟಿಂಗ್ ವ್ಯವಸ್ಥೆ, ಹೈಡ್ರೋಜನ್ ಆಧರಿತ ಉಕ್ಕು ತಯಾರಿಕೆ ಯೋಜನೆಗಳು ಮತ್ತು ಉಕ್ಕಿನ ಸ್ಕ್ರ್ಯಾಪ್ ಮರುಬಳಕೆ ನೀತಿ ಸೇರಿದಂತೆ ಪ್ರಮುಖ ಉಪಕ್ರಮಗಳನ್ನು ಸರಕಾರವು ಕೈಗೊಂಡಿದೆ” ಎಂದು ಅವರು ವಿವರಿಸಿದರು.

ಸರಕಾರದ ಪೂರ್ವಭಾವಿ ಕ್ರಮಗಳ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು,”ಇಂಧನ ದಕ್ಷತೆಯು ಇನ್ನು ಮುಂದೆ ಐಚ್ಛಿಕವಲ್ಲ. ತ್ಯಾಜ್ಯ ಶಾಖ ಹೆಚ್ಚಳ, ಆತ್ಯಾಧುನಿಕ ಮಾಲಿನ್ಯ ನಿಯಂತ್ರಣ ವ್ಯವಸ್ಥೆ ಮತ್ತು ನವೀಕರಿಸಬಹುದಾದ ಇಂಧನ ಏಕೀಕರಣ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಲ್ಲಿ ನಾವು ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳನ್ನು (MSME) ಉತ್ತೇಜಿಸುತ್ತೇವೆ ಎಂದು ಸಚಿವರು ನುಡಿದರು.

“ಮನೆ, ಬೃಹತ್‌ ಕಟ್ಟಡ, ಹೆದ್ದಾರಿ, ಸೇತುವೆ, ರೇಲ್ವೆ, ವಿಮಾನ, ರಾಕೆಟ್‌ ಸೇರಿದಂತೆ ರಾಷ್ಟ್ರದ ಭವ್ಯ ಇತಿಹಾಸವನ್ನು ನಿರ್ಮಿಸುವ ಉಕ್ಕು ಕ್ಷೇತ್ರವನ್ನು ನಾವು ಮತ್ತಷ್ಟು ಸಶಕ್ತಗೊಳಿಸಬೇಕಿದೆ. ನೀತಿ, ಉದ್ದೇಶ ಮತ್ತು ನಮ್ಮ ಜನರ ಉತ್ಸಾಹದೊಂದಿಗೆ ನಾವು ಭಾರತವನ್ನು ಜಾಗತಿಕ ಉಕ್ಕಿನ ಶಕ್ತಿ ಕೇಂದ್ರವನ್ನಾಗಿ ಮಾಡುತ್ತೇವೆ” ಎಂದು ಸಚಿವರು ತಿಳಿಸಿದರು.

ಇದೇ ವೇಳೆ ಜಾಗತಿಕವಾಗಿ ಭಾರತದ ಉಕ್ಕು ಉದ್ಯಮಕ್ಕೆ ಏಕೀಕೃತ ಗುರುತನ್ನು ಸಂಕೇತಿಸುವ ಭಾರತ್‌ ಸ್ಟೀಲ್ ಲೋಗೋ ಮತ್ತು ಭಾರತ್ ಸ್ಟೀಲ್ ಅಂತರ್ಜಾಲ ತಾಣವನ್ನು ಅನಾವರಣಗೊಳಿಸಿದ ಸಚಿವರು; ಉಕ್ಕು ಉತ್ಪಾದನೆಯಲ್ಲಿ ಇಂಗಾಲ ಹೊರಸೂವಿಕೆಯನ್ನು ಕನಿಷ್ಠ ಮಟ್ಟಕ್ಕೆ ತಂದಿರುವ ಹಾಗೂ ಉಕ್ಕು ಉತ್ಪಾದನಾ ಮಾನದಂಡಗಳ ಗುರಿಯನ್ನು ಸಾಧಿಸಿದ ಉದ್ಯಮದ ನಾಯಕರಿಗೆ ಗೌರವಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X