ಉಡುಪಿ | ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರಿಂದಲೇ ಯುವಕನ ಹತ್ಯೆ – ಎಸ್ ಪಿ ಹರಿರಾಂ ಶಂಕರ್

Date:

Advertisements

ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು, ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Advertisements

ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವಿನಯ್ ನನ್ನು ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಆರೋಪಿ ಅಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ವಿನಯ್ ದೇವಾಡಿಗ ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿರುವುದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ವಿನಯ್ ದೇವಾಡಿಗ, ಮಂಗಳವಾರ ವೈಯಕ್ತಿಕ ಕೆಲಸದ ನಿಮಿತ್ತ ಉಡುಪಿಗೆ ಹೋಗಿ ಸಂಜೆ 6 ಗಂಟೆಗೆ ಮನೆಗೆ ಬಂದು ಕೋಣೆಯಲ್ಲಿ ಮಲಗಿದ್ದರು. ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮನೆಯ ಎಲ್ಲಾ ಕಡೆಗಳಲ್ಲಿ ವಿನಯ್ ಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಕೋಣೆಯಲ್ಲಿದ್ದ ವಿನಯ್ ಶಬ್ದದಿಂದ ಎಚ್ಚರಗೊಂಡಾಗ ಆರೋಪಿಗಳು ವಿನಯ್ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಪ್ರಯತ್ನಪಟ್ಟರು. ನಂತರ ಅಜಿತ್, ವಿನಯ್ ನನ್ನು ತಪ್ಪಿಸಿಕೊಳ್ಳದಂತೆ ಗಟ್ಟಿಯಾಗಿ ಹಿಡಿದುಕೊಂಡ. ಆಕ್ಷೇಂದ್ರ ಹಾಗೂ ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ಅವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X