ಹುಬ್ಬಳ್ಳಿ | ಜಾತಿ ನಿಂದನೆ; ಸೂಕ್ತ ಕಾನೂನು‌ ಕ್ರಮಕ್ಕೆ ಕುರುಬ ಸಮಾಜ ಒತ್ತಾಯ

Date:

Advertisements

ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅಭಿಮಾನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ‌ಕೈಗೊಳ್ಳಲು ಒತ್ತಾಯಿಸಿ ಪ್ರದೇಶ ಕುರುಬ ಸಮಾಜದ ಒಕ್ಕೂಟದ ವತಿಯಿಂದ ಹುಬ್ಬಳ್ಳಿ ಸಬರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಡಿಕೆಶಿ ಅಭಿಮಾನಿಗಳಾದ ಬಿ.ಎನ್. ಕುಮಾರ ಹಾಗೂ ಶಾನಬೋಗರಹಳ್ಳಿ ಗ್ರಾಮದ ಮಹೇಶ ಆಗಸ್ಟ್ 8ರಂದು ರಾತ್ರಿ ಮಂಡ್ಯ ತಾಲೂಕಿನ ಬಸರಾಳ ಗ್ರಾಮದ ಹೇಮಾವತಿ ಬಡಾವಣೆಯಲ್ಲಿ ಸಾರ್ವಜನಿಕವಾಗಿ ಕುರುಬ ಸಮಾಜವನ್ನು ಮತ್ತು ಕುರುಬ ಜಾತಿಯ ಬಗ್ಗೆ ಜಾತಿ ನಿಂದನೆ ಮಾಡಿ ಹಾಗೂ ಕುರುಬ ಸಮಾಜದ ಸಿಎಂ ಸಿದ್ದರಾಮಯ್ಯ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಮುಖ್ಯಮಂತ್ರಿ ಅಭಿಮಾನಿಗಳಲ್ಲಿ ನೋವುಂಟು ಮಾಡಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದರಿಂದ ಇಡೀ ಕುರುಬ ಸಮಾಜಕ್ಕೆ ಅವಮಾನವಾಗಿದೆ. ಆರೋಪಿತರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕುರುಬ ಸಮಾಜದ ಮುಖಂಡರು, ಸಿಎಂ ಅಭಿಮಾನಿಗಳು ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇಂಥಹ ಘಟನೆ ನಡೆದರೂ ಪೊಲೀಸ್ ಇಲಾಖೆ ಮೌನವೇಕೆ ವಹಿಸಿದೆ!” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿದ್ದಣ್ಣ ತೇಜಿ, ಎಚ್ ಕೆ ದೊಡ್ಮನಿ, ನಿಂಗಪ್ಪ ಜಕ್ಲಿ, ರವಿ ಕಟ್ಟಿಮನಿ, ರವಿರಾಜ್ ಕಂಬಳಿ, ಕೋಪ ದೈಗುಡಿ, ಧರ್ಮಣ್ಣ ಕುರಿ, ಶಶಿಧರ್ ನವೀನ್ ಜಂಗನ್ನವರ್ ಮುಂತಾದವರು ಇದ್ದರು.

Advertisements

ಇದನ್ನೂ ಓದಿ: ಹುಬ್ಬಳ್ಳಿ | ಪ್ರಲ್ಹಾದ್ ಜೋಶಿ ಎಲ್ಲಿದ್ದಾರೆಂದು ಪತ್ತೆ ಹಚ್ಚಬೇಕಿದೆ: ವಿಜಯಕುಮಾರ ಗುಂಜಾಳ ಟೀಕೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X