ಮುಸ್ಲಿಂ ಸಮುದಾಯದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷರಾದ ಖಮರ್ ಜುನೈದ್ ಖುರೇಷಿ ಅವರು ನೀಡಿದ ದೂರಿನ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
‘ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂಪಾಯಿಗಳ ನಗದು ಪ್ರೋತ್ಸಾಹ ಧನ ನೀಡಲಾಗುವುದು’ ಎಂದು ಆಗಸ್ಟ್ 11ರಂದು ಕೊಪ್ಪಳದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದರು. ಈ ಹೇಳಿಕೆಯು ಒಂದು ಸಮುದಾಯವನ್ನು ಗುರಿಯಾಗಿಸಿ ಪ್ರಚೋದಿಸುವ ಕೆಲಸ ಮಾಡಿದ್ದಾರೆಂದು ಅವರು ಆರೋಪಿಸಿ ಶಾಸಕ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಇದನ್ನು ಓದಿದ್ದೀರಾ? ತಮಿಳರ ವಿರೋಧಿ ಆರೋಪ: ರಾಜ್ಯಪಾಲ ಆರ್ ಎನ್ ರವಿ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!
ಈ ದೂರಿನನ್ವಯ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.