ಬುಧವಾರ ಯಾದಗಿರಿ ನಗರದ ಪ್ರವಾಸಿ ಮಂದಿರದಲ್ಲಿ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಸಭೆ ಹಮ್ಮಿಕೊಳ್ಳಲಾಯಿತು.
‘ಸಭೆಯಲ್ಲಿ ಒಳ ಮೀಸಲಾತಿಯ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಮನಗಂಡು ನ್ಯಾಯಮೂರ್ತಿ ನಾಗಮೋಹನ್ ದಾಸ್ ವಿರುದ್ಧ ಆಗಸ್ಟ್ 14ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲಾ ಬಲಗೈ ಸಮುದಾಯದ ಪ್ರತಿನಿಧಿಗಳು, ಮುಖಂಡರು, ಮಹಿಳೆಯರು, ಯುವಕರು ಪ್ರತಿಯೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ’ ಮನವಿ ಮಾಡಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲು
ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಸುಭಾಸ್ ಚಂದ್ರ ಬೋಸ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ. ಆ ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ ಮನವಿ ಸಲ್ಲಿಸಲಾಗುವುದು ಎಂದು ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯ ಮುಖಂಡರು ಮಾಹಿತಿ ನೀಡಿದರು.
