ಕೊರಟಗೆರೆ | ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು: ನಟ ಚೇತನ್ ಅಹಿಂಸಾ

Date:

Advertisements

ಸಮಾಜದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ ಜೊತೆಗೆ ಮಾದರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಿಳಿಸಿದರು.

ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಖಾಸಗಿ ವಾಹಿನಿ ನೂತನವಾಗಿ ಪ್ರಾರಂಭಗೊಳ್ಳುತ್ತಿರುವ ಸುವರ್ಣ ಯುಗ ವಾಹಿನಿಯ ಕಚೇರಿಯಲ್ಲಿ ಆಯೋಜಿಸಲಾದ ಸಮಾನತೆ ಹಾದಿಯ ಪಯಣ ಕುರಿತು ಪ್ರೋಜೆಕ್ಟರ್ ಮೂಲಕ ಸಮಾಜದ ಬದಲಾವಣೆ ಹಾಗೂ ಸಮಾನತೆ ಕುರಿತು ಹಲವು ಮಾಹಿತಿ ನೀಡಿದ ಅವರು, ವಿವಿಧ ಸಂಘಟನೆಯ ಪದಾಧಿಕಾರಿಗಳಿಗೆ ಮಾಹಿತಿ ನೀಡಿ ಭವಿಷ್ಯದ ಕರ್ನಾಟಕ ನಿರ್ಮಾಣ ಮಾಡಬೇಕು, ಉತ್ತಮ ಸಮಾಜ ನಿರ್ಮಾಣವಾಗಬೇಕು ಎಂದು ಹೇಳಿದರು.

ಪೆರಿಯಾರ್ ಮತ್ತು ಅಂಬೇಡ್ಕರ್ ಅವರು ನಾವು ಅಧಿಕಾರದಲ್ಲಿ ಬರಬೇಕು ಎಂದು ಹೇಳುತ್ತಾರೆ. ನಾವು ಎಂದರೆ ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು. ಅಸಮಾನತೆ ವ್ಯವಸ್ಥೆಯೇ ನಮ್ಮ ಶತ್ರು. ಈ ವ್ಯವಸ್ಥೆಯಲ್ಲಿ ಆದಿವಾಸಿ, ದಲಿತ, ಮಹಿಳೆಯರನ್ನು ವಿರೋಧಿಸಲಾಗುತ್ತದೆ. ಇದನ್ನು ನಾವು ಗುರುತಿಸಿಕೊಂಡು ಒಂದು ಪರ್ಯಾಯವಾದ ಶಕ್ತಿ ಕಟ್ಟಬೇಕು ಎಂದು ಹೇಳಿದರು.

Advertisements

ಬಾಬಾ ಸಾಹೇಬರಿಗೆ ಮೂರ್ತಿ, ವ್ಯಕ್ತಿ ಆರಾಧನೆ ಇಷ್ಟ ಇರಲಿಲ್ಲ. ವ್ಯಕ್ತಿ ಆರಾಧನೆ ಮಾಡಿದಷ್ಟು ಪ್ರಜಾಪ್ರಭುತ್ವಕ್ಕೆ ಕಷ್ಟ ಆಗುತ್ತದೆ. ನನ್ನನ್ನು ಪೂಜಿಸಬೇಡಿ, ನನ್ನನ್ನು ಓದಿ ಎಂದು ಹೇಳುತ್ತಿದ್ದರು. ನಾವು ಅವರನ್ನು ಪೂಜಿಸುತ್ತೇವೆ ಆದರೆ ಅವರ ವಿಚಾರಗಳನ್ನು ಅರ್ಥ ಮಾಡಿಕೊಳ್ಳಲ್ಲ.. ಬುದ್ಧ, ಬಸವ, ಅಂಬೇಡ್ಕರ್‌ರವರ ಆದರ್ಶ ಜೀವನವನ್ನು ಅರ್ಥ ಮಾಡಿಕೊಂಡು ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ಹೇಳಿದರು.

ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ಉತ್ತಮ ಸಮಾಜ ಎಂದರೆ ಅದೆಷ್ಟು ಜ್ಞಾನಪೀಠ ಪ್ರಶಸ್ತಿ ಪಡೆಯುತ್ತೇವೆ, ಅದೆಷ್ಟು ದೊಡ್ಡ ಬಜೆಟ್ ಸಿನಿಮಾ ಮಾಡುತ್ತೇವೆ ಎಂದಲ್ಲ. ಉತ್ತಮ ಸಮಾಜ ಎಂದರೆ ಅಂಬೇಡ್ಕರ್ ಕಂಡಂತಹ ಸಮಸಮಾಜ, ಸಮಾನತೆಯ ಸಮಾಜವಾಗಿದೆ ಎಂದು ಹೇಳಿದರು.

ಕೆಯು‌‌‌ಡಬ್ಲ್ಯೂ‌‌‌ಜೆ ಅಧ್ಯಕ್ಷ ಕೆ.ವಿ ಪುರುಷೋತ್ತಮ್ ಮಾತನಾಡಿ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಾನಮಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ದಕ್ಕಬೇಕಿದೆ. ಶೈಕ್ಷಣಿಕ, ಆರೋಗ್ಯ ಹಾಗೂ ಪರಿಸರ ಜೊತೆಗೆ ಅಭಿವೃದ್ಧಿ ಕುರಿತು ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆದು ಸಂವಿಧಾನ ಆಶಯ ಈಡೇರಿಸಬೇಕಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ತಿಮ್ಮಾಜಮ್ಮ, ಉಪಾಧ್ಯಕ್ಷ ಹೆಚ್.ಎನ್ ಕೆ.ಯು‌‌‌.ಡಬ್ಲ್ಯೂ‌‌‌.ಜೆ ನಾಗರಾಜು, ಅಗ್ರಹಾರ ಗ್ರಾ.ಪಂ ಅಧ್ಯಕ್ಷ ಪ್ರಭಾಕರ್, ದಲಿತ ಮುಖಂಡ ದಾಡಿ ವೆಂಕಟೇಶ್, ದೊಡ್ಡಯ್ಯ, ವೀರಕ್ಯಾತರಾಯ, ಬಸವರಾಜು, ಪ.ಪಂ ಮಾಜಿ ಅಧ್ಯಕ್ಷ ನಯಾಜ್‌ಅಹಮದ್, ಮಹಮ್ಮದ್ ಗೌಸ್‌ಫೀರ್, ಫಾರುಕ್, ನವೀನ್, ರಾಕೇಶ್, ಉಮೇಶ್, ರಿಜ್ವಾನ್‌ಪಾಷ, ಸುರೇಶ್, ರಿಜ್ವಾನ್‌ಅಹಮದ್, ಚಿಕ್ಕಿರಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X