ನಿಮಿಷಾ ಪ್ರಿಯಾ ಜೀವಕ್ಕೆ ತಕ್ಷಣ ಬೆದರಿಕೆ ಇಲ್ಲ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್‌ನ್ಯಾಶನಲ್ ಆ್ಯಕ್ಷನ್ ಕೌನ್ಸಿಲ್’

Date:

Advertisements

ಕೊಲೆ ಆರೋಪದಲ್ಲಿ ಯೆಮನ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾರ ಪ್ರಾಣಕ್ಕೆ ತಕ್ಷಣದ ಬೆದರಿಕೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಲಾಯಿತು.

‘ಸೇವ್ ನಿಮಿಷಾ ಪ್ರಿಯಾ ಇಂಟರ್‌ ನ್ಯಾಶನಲ್ ಆ್ಯಕ್ಷನ್ ಕೌನ್ಸಿಲ್’ನ್ನು ಪ್ರತಿನಿಧಿಸುವ ವಕೀಲರೊಬ್ಬರು ಈ ಮಾಹಿತಿಯನ್ನು ಸುಪ್ರೀಂ ಕೋರ್ಟ್‌ಗೆ ನೀಡಿದರು. ಈ ಸಂಘಟನೆಯು ನಿಮಿಷಾ ಪ್ರಿಯಾಗೆ ಪಾಲಕ್ಕಾಡ್‌ನಿಂದ ಕಾನೂನು ನೆರವು ನೀಡುತ್ತಿದೆ.

‘‘ಮಾತುಕತೆಗಳು ನಡೆಯುತ್ತಿವೆ. ಈಗಿನ ಮಟ್ಟಿಗೆ, ಅವರ ಜೀವಕ್ಕೆ ತಕ್ಷಣದ ಬೆದರಿಕೆಯಿಲ್ಲ. ವಿಚಾರಣೆಯನ್ನು ದಯವಿಟ್ಟು ನಾಲ್ಕು ವಾರಗಳ ಕಾಲ ಮುಂದೂಡಿ. ಬಹುಷಃ ಆ ವೇಳೆಗೆ ಎಲ್ಲವೂ ಇತ್ಯರ್ಥಗೊಳ್ಳಬಹುದು’’ ಎಂದು ವಕೀಲರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅವಾಂತರಕಾರಿ ಆಸಿಮ್ ಮುನೀರ್ ಮತ್ತು ಮೌನಿ ಮೋದಿ

ಪ್ರಿಯಾರ ಮರಣ ದಂಡನೆಯನ್ನು ರದ್ದುಪಡಿಸಲಾಗಿದೆ ಎಂಬುದಾಗಿ ಕೇರಳದ ಮುಫ್ತಿ ಅಬೂಬಕರ್ ಮುಸ್ಲಿಯಾರ್ ಹೇಳಿದ ವಾರಗಳ ಬಳಿಕ ಈ ಬೆಳವಣಿಗೆ ಸಂಭವಿಸಿದೆ.

ತನ್ನ ವಾಣಿಜ್ಯ ಪಾಲುದಾರ ಹಾಗೂ ಯೆಮನ್ ರಾಷ್ಟ್ರೀಯ ತಲಾಲ್ ಅಬ್ದು ಮಹದಿಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ಕೇರಳದ ಪಾಲಕ್ಕಾಡ್ ನಿವಾಸಿ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಯನ್ನು ಎದುರಿಸುತ್ತಿದ್ದಾರೆ. ಅವರಿಗೆ 2020ರಲ್ಲಿ ಮರಣ ದಂಡನೆ ವಿಧಿಸಲಾಗಿತ್ತು. ಈ ವರ್ಷದ ಜುಲೈ 16ರಂದು ಅವರನ್ನು ಗಲ್ಲಿಗೇರಿಸಬೇಕಾಗಿತ್ತು. ಆದರೆ, ಅದನ್ನು ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X