ಯಾದಗಿರಿ | ಒಳಮೀಸಲಾತಿ : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ‌ಪ್ರತಿಭಟನೆ

Date:

Advertisements

ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ಅವರ ವರದಿ ಅವೈಜ್ಞಾನಿಕ, ಅಪೂರ್ಣ, ಮತ್ತು ದುರುದ್ದೇಶ ಪೂರಿತವಾಗಿದ್ದು, ಈ ವರದಿಯನ್ನು ಸರಕಾರ ತಿರಸ್ಕರಿಸಿ ಬಲಗೈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ವೃತ್ತದಿಂದ ಸುಭಾಷ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ‌ ನಡೆಸುವುದರ ಮೂಲಕ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ದಸಂಸ ಜಿಲ್ಲಾಧ್ಯಕ್ಷ ಮರೆಪ್ಪ ಚಟ್ಟೇರಕರ್‌ ಮಾತನಾಡಿ, “ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ನೀಡಿರುವ ವರದಿ ತಡೆ ಹಿಡಿದು ತಕ್ಷಣ ಸಚಿವ ಸಂಪುಟದ ಉಪ ಸಮಿತಿ ನೇಮಿಸಿ ಸ್ಪಷ್ಟ ಮತ್ತು ನ್ಯಾಯ ಸಮೃತವಾದ ವೈಜ್ಞಾನಿಕವಾಗಿ ವರದಿ ಸಿದ್ದಪಡಿಸಿ ಸಮಸ್ತ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Advertisements

ದಲಿತ ಹಿರಿಯ ಮುಖಂಡ ನೀಲಕಂಠ ಬಡಿಗೇರ ಮಾತನಾಡಿ, ʼಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಅತ್ಯಂತ ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಬಲಗೈ ಸಮುದಾಯದ ಜನ ಸಂಖ್ಯೆಯನ್ನು ಉದ್ದೇಶ ಪೂರ್ವಕವಾಗಿ ಕಡಿಮೆ ಮಾಡಿರುವುದಲ್ಲದೇ, ಜಾತಿಯೇ ಅಲ್ಲದ ಆದಿಕರ್ನಾಟಕ, ಆದಿದ್ರಾವಿಡ, ಅದಿಆಂದ್ರ ಸಮೂಹಕ್ಕೆ ಶೇಕಡ 1ರಷ್ಟು ಮೀಸಲಾತಿ ನಿಗದಿಪಡಿಸಿರುವುದನ್ನು ರದ್ದುಪಡಿಸಿ, ಸದರಿ ಮೀಸಲಾತಿಯನ್ನು ಸಂಬಂಧಿಸಿದ ಜಾತಿಗಳಿಗೆ ಹಂಚಿಕೆ ಮಾಡಲು ಸಚಿವ ಸಂಪುಟದ ಉಪ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ : ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

ಪ್ರತಿಭಟನೆಯಲ್ಲಿ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯ ನಾಗಣ್ಣ ಬಡಿಗೇರ, ರಾಮಣ್ಣ ಸಾದ್ಯಾಪೂರ, ಶಿವುಪುತ್ರ ಜವಳಿ, ಮಹಾದೇವ ದಿಗ್ವಿ, ಗಾಳೆಪ್ಪ ಪೂಜಾರಿ, ಶ್ರೀಶೈಲ ಹೊಸ್ಮನಿ, ಮಲ್ಲಿಕಾರ್ಜುನ ಪೂಜಾರಿ, ರಾಯಪ್ಪ ಸಾಲಿಮನಿ, ಸೈದಪ್ಪ ಕುಯಿಲೂರ್, ಮಲ್ಲಿಕಾರ್ಜುನ ಕುರಕುಂಬಳಕ, ಪ್ರಭು ಬುಕ್ಕಲ್, ಡಾ. ಭಗವಂತ ಅನವಾರ, ರಾಹುಲ್ ಹುಲಿಮನಿ, ಚಂದಪ್ಪ ಮುನಿಯಪ್ಪನೋರ್, ಶರಣು ಎಸ್ ನಾಟೇಕಾರ್, ಸಂತೋಷ ನಿರ್ಮಲಕರ್, ಕಾಶಿನಾಥ ನಾಟೇಕಾರ್, ಚಂದ್ರಕಾಂತ ಮುನಿಯಪ್ಪನೋರ, ಪರಶುರಾಮ ಒಡೆಯರ್, ನಿಂಗಣ್ಣ ಬೀರನಾಳ, ಸಂಪತ್ ಚಿನ್ನಾಕರ್, ವಸಂತ ಸುಂಗಲಕರ್, ಸೇರಿದಂತೆ ಅನೇಕರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X