79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಕ್ರವಾರ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ,ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು.
ಮೈದಾನದಲ್ಲಿ ತೆರದ ಜೀಪಿನಲ್ಲಿ ಸಂಚರಿಸಿದ ಸಚಿವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸೇರಿ ವಿವಿಧ ಶಾಲಾ ಹಾಗೂ ಕಾಲೇಜಿನ ತುಕಡಿಗಳು ಅಕರ್ಷಕ ಪಥ ಸಂಚಲನ ಗಮನ ಸೆಳೆಯಿತು.
ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ʼಸ್ವಾತಂತ್ರ್ಯ ದಿನಾಚರಣೆಯು ದೇಶದ ಗೌರವ ಕಾಪಾಡುವ ಹೆಮ್ಮೆಯ ದಿನ, ರಾಷ್ಟ್ರದ ಭಾವೈಕತೆಗಾಗಿ ಶ್ರಮಿಸುವ ಪುಣ್ಯ ದಿನ. ಕೋಟ್ಯಂತರ ಭಾರತೀಯರ ತ್ಯಾಗ, ಬಲಿದಾನದಿಂದ ದಕ್ಕಿರುವ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲರ ಮೇಲಿದೆ. ಭಾರತೀಯರ ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಧಾರ್ಮಿಕ ಭವಿಷ್ಯ ಹಾಗೂ ಉತ್ತಮ ಸಮಾಜ ನಿರ್ಮಿಸುವ ಸಾಮರ್ಥ್ಯವನ್ನು ಸ್ವಾತಂತ್ರ್ಯೋತ್ಸವ ತಂದು ಕೊಟ್ಟಿದೆʼ ಎಂದು ಹೇಳಿದರು.

ಸಮಾರಂಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿಸಿಎಫ್ ಆಶೀಷ ರೆಡ್ಡಿ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ : ಬೀದರ್ | ಒಪ್ಪೊದಿಲ್ಲ, ಒಪ್ಪೊದಿಲ್ಲ ನಾಗಮೋಹನದಾಸ್ ವರದಿ ಒಪ್ಪೊದಿಲ್ಲ : ಬೃಹತ್ ಪ್ರತಿಭಟನಾ ರ್‍ಯಾಲಿ
Zhgfjgghjff