ಬೆಂಗಳೂರು ನಗರದ ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಮೃತ ಬಾಲಕನನ್ನು ಮುಬಾರಕ್(8) ಎಂದು ಗುರುತಿಸಲಾಗಿದೆ. ಸ್ಫೋಟದಲ್ಲಿ ಹತ್ತಕ್ಕೂ ಅಧಿಕ ಮನೆಗೆ ಹಾನಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಆಂಧ್ರಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿ ಸಾವು
ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಫಾತಿಮಾ(8), ಸರಸಮ್ಮ(50), ಸಬ್ರಿನ್ ಬಾನು(35), ಕಸ್ತೂರಿ(28) ಸೇರಿ 12ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸಿಲಿಂಡರ್ ಸ್ಫೋಟಿಸಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ ಎನ್ನಲಾಗಿದೆ.
