ಕೋಲಾರ | ವೇಮಗಲ್‌ ಪಟ್ಟಣ ಪಂಚಾಯ್ತಿ ಚುನಾವಣೆ; ಕಾಂಗ್ರೆಸ್‌ ಪರ ಶಾಸಕ ಕೊತ್ತೂರ್ ಮಂಜುನಾಥ್‌ ಪ್ರಚಾರ

Date:

Advertisements

ಕೋಲಾರದ ವೇಮಗಲ್‌ ಪಟ್ಟಣ ಪಂಚಾಯ್ತಿಯ ಚುನಾವಣಾ ಪ್ರಚಾರದಲ್ಲಿ ಶಾಸಕ ಕೊತ್ತೂರ್‌ ಮಂಜುನಾಥ್‌ ಸಕ್ರಿಯವಾಗಿದ್ದಾರೆ. ಕಾಂಗ್ರೆಸ್‌ ಪರ ಮತ ಹಾಕುವಂತೆ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಜನತೆಗೆ ನೀಡಿದ್ದ ಭರವಸೆಗಳನ್ನೆಲ್ಲ ಈಡೇರಿಸಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಎಲ್ಲ ಗ್ಯಾರಂಟಿ ಯೋಜನೆಗಳು ಜನಪ್ರಿಯವಾಗಿದ್ದು, ಈ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕಾಗಿದೆ. ಈಗಾಗಲೇ ವೇಮಗಲ್ ಪಟ್ಟಣ ಪಂಚಾಯತಿಯಾಗಿದ್ದು ಜೊತೆಗೆ ಯೋಜನಾ ಪ್ರಾಧಿಕಾರವು ಆಗಿದೆ. ಕೈಗಾರಿಕೆಗಳು ಸ್ಥಾಪನೆಯಾಗಿವೆ. ಈ ಭಾಗದ ಸಮಸ್ಯೆಗಳನ್ನು ಕಾಂಗ್ರೆಸ್ ಆಡಳಿತವು ಪಟ್ಟಣ ಪಂಚಾಯತಿಗೆ ಬಂದರೆ ನಿವಾರಿಸಲಿದ್ದಾರೆ. ಆದ್ದರಿಂದ ಎಲ್ಲ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಪರ ಆಡಳಿತ ನೀಡಿ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು ಕಾಂಗ್ರೆಸ್ ಸರ್ಕಾರ ಬಡವರ ಪರ, ಅಭಿವೃದ್ಧಿ ಪರ ಇದೆ ಎಂಬುದನ್ನು ಸಾಬೀತು ಮಾಡಿದೆ ಎಂದು ತಿಳಿಸಿದರು.

ಎಂಎಲ್‌ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, “ಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಜನರಿಗೆ ನೇರವಾಗಿ ತಲುಪುವ ಗ್ಯಾರಂಟಿ ಯೋಜನೆಗಳನ್ನು ಈಗ ಬೇರೆ ರಾಜ್ಯಗಳಲ್ಲಿ ಜಾರಿ ಮಾಡಿವೆ. ನಿರೀಕ್ಷೆಗೂ ಮೀರಿ ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಬೆಳೆದು ಹೊರಗೂ ವಿಸ್ತರಿಸಿವೆ. ಇದು ಗ್ಯಾರಂಟಿ ಯೋಜನೆಗಳಿಗಿರುವ ಶಕ್ತಿ” ಎಂದರು.

Advertisements

ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, “ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹಾದಿಯಾಗಿ ಅಭಿವೃದ್ಧಿಗೆ ಈ ಭಾಗದ ಜನಪ್ರತಿನಿಧಿಗಳು ಕೈ ಜೋಡಿಸಿದ್ದಾರೆ ಕಾಂಗ್ರೆಸ್ ಬೆಂಬಲಿಸಬೇಕಾಗಿದೆ ಚುನಾವಣೆಯಲ್ಲಿ ಜನರು ಮನಸ್ಸು ಮಾಡಿ ಬದಲಾವಣೆ ತಂದಾಗ ಮಾತ್ರ ಗ್ರಾಮಗಳು ವಾರ್ಡ್ ಗಳು ಅಭಿವೃದ್ಧಿಯಾಗುತ್ತದೆ. ಅಭ್ಯರ್ಥಿಗಳಾಗಲಿ ಮುಖಂಡರುಗಳಾಗಲಿ ಒಂದೇ ವಾರ್ಡ್ ಗೆ ಸೀಮಿತವಾಗದೆ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲಿ ಮತ ಕೇಳುವ ಕೆಲಸ ಮಾಡಬೇಕು ಎಲ್ಲರಿಗೂ ಎಲ್ಲಾ ಕಡೆ ಪರಿಚಯಸ್ತರು ಇರುತ್ತಾರೆ ಕಾಂಗ್ರೆಸ್ ಪಕ್ಷಕ್ಕೆ ಮತ ಕೇಳಿ ಅಧಿಕಾರ ಬರುವ ಕೆಲಸ ಮಾಡಬೇಕು” ಎಂದರು.

ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಮುಖಂಡರಾದ ಉದಯಶಂಕರ್, ಚಿಕ್ಕಣ್ಣ, ಮುನಿಕೃಷ್ಣಪ್ಪ, ರಾಜಣ್ಣ, ಡೈರಿ ಅಧ್ಯಕ್ಷ ವಿ. ಎಂ. ಶ್ರೀನಿವಾಸ್, ನಾಗರಾಜ್, ವೆಂಕಟೇಶ್, ರಮೇಶ್, ಸೀತಾರಾಮ್, ರವಿಕುಮಾರ್, ಅಭ್ಯರ್ಥಿಗಳಾದ ವನಿತಾ ಮಹೇಶ್, ಶಶಿಕಲಾ ನಾಗೇಶ್, ಕೆ. ಆರ್.ಕುಮಾರ್, ರವಿಚಂದ್ರ, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X