ತುಂಗಭದ್ರಾ ಜಲಾಶಯದ 7 ಗೇಟ್​ಗಳು ಬೆಂಡ್​: ಸಚಿವ ಶಿವರಾಜ್​ ತಂಗಡಗಿ

Date:

Advertisements

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಏಳು ಗೇಟ್​ಗಳು ಬೆಂಡ್ ಆಗಿವೆ ಎಂದು ಜಲಾಶಯದ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ ಸೇರಿದಂತೆ 7 ಗೇಟ್​ಗಳು ಬೆಂಡ್ ಆಗಿವೆ. ಇದರಲ್ಲಿ, 6 ಗೇಟ್​ಗಳನ್ನು ಮೇಲೆ ಎತ್ತಲು ಹಾಗೂ ಇಳಿಸಲು ಆಗುತ್ತಿಲ್ಲ. ಗೇಟ್ ನಂಬರ್ 4 ಅನ್ನು ಕೇವಲ ಎರಡು ಅಡಿ ಮಾತ್ರ ಮೇಲಕ್ಕೆ ಎತ್ತಬಹುದು. ಗೇಟ್ ನಂಬರ್ 4 ಸೇರಿದಂತೆ ಒಟ್ಟು ಏಳು ಗೇಟ್​ಗಳಿಗೆ ಹಾನಿಯಾಗಿವೆ ಎಂದು ತಿಳಿಸಿದರು.

ಒಂದು ಗೇಟ್ ಕೊಚ್ಚಿ ಹೋದಾಗಲೇ ಅಪಾರ ಪ್ರಮಾಣದ ನೀರು ಪೋಲಾಗಿತ್ತು. ಇದೀಗ ಏಳು ಗೇಟ್​ಗಳು ಬೆಂಡ್ ಆಗಿದ್ದು, ಯಾವಾಗ ಏನಾಗುತ್ತದೆ ಎಂಬ ಆತಂಕ ಕಾಡುತ್ತಿದೆ. ಈ ಬಾರಿ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಹೆಚ್ಚಿನ ಪ್ರಮಾಣದ ನೀರು ಜಲಾಶಯಕ್ಕೆ ಬಂದಿದೆ. ನೀರಿನ ಒತ್ತಡದಿಂದ ಈ 7 ಗೇಟ್​ಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಶಿವರಾಜ್​ ತಂಗಡಗಿ ಹೇಳಿದ್ದಾರೆ.

Advertisements

ಕಳೆದ ವರ್ಷ ಆಗಸ್ಟ್ 10 ರಂದು ತುಂಗಭದ್ರಾ ಜಲಾಶಯದ ಗೇಟ್ ನಂಬರ್ 19 ಕೊಚ್ಚಿ ಹೋಗಿತ್ತು. ಒಂದು ವರ್ಷವಾದರೂ ಹೊಸ ಗೇಟ್ ಅಳವಡಿಸಿಲ್ಲ. ಈ ನಡುವೆ ಇದೀಗ ಏಳು ಗೇಟ್​ಗಳು ಡ್ಯಾಮೇಜ್ ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ಗೇಟ್ ಕಿತ್ತು ಹೋದ ಸಮಯದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸ ಗೇಟ್ ಅಳವಡಿಸುವ ಕೆಲಸ ಆರಂಭಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಒಂದು ವರ್ಷವಾದರೂ ಹೊಸ ಗೇಟ್ ಅಳವಡಿಸಿಲ್ಲ. ಇದರ ನಡುವೆ ಸಚಿವ ಶಿವರಾಜ್​ ತಂಗಡಗಿ ಅವರು ಬಹಿರಂಗಪಡಿಸಿದ ಮಾಹಿತಿ ನಾಲ್ಕು ಜಿಲ್ಲೆಯ ರೈತರನ್ನ ಚಿಂತೆಗೀಡು ಮಾಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಟ್ಟೆಗೆ ವಿರೋಧ; ಬಡ ಮಕ್ಕಳ ಆಹಾರದ ಸ್ವಾತಂತ್ರ್ಯಕ್ಕೆ ಕೊಕ್ಕೆ

2024ರ ಆಗಸ್ಟ್ 10 ರಂದು ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿತ್ತು.‌ ಇದರಿಂದಾಗಿ ಅಪಾರ ಪ್ರಮಾಣದ ನೀರು ಪೋಲಾಗಿತ್ತು.‌ ಈ ವೇಳೆ ಡ್ಯಾಂನ ಎಲ್ಲ ಕ್ರಸ್ಟ್ ಗೇಟ್​ಗಳನ್ನು ಬದಲಾವಣೆ ಮಾಡಬೇಕೆಂದು ವರದಿಯನ್ನು ತಜ್ಞರು ನೀಡಿದ್ದರು. ಆದರೆ, ಸರ್ಕಾರ ಮಾತ್ರ ಎಲ್ಲ ಗೇಟ್ ಬದಲಾವಣೆ ಇರಲಿ ಕನಿಷ್ಠ 19ನೇ ಕ್ರಸ್ಟ್ ಗೇಟ್​ಗೆ ಹೊಸ ಗೇಟ್ ಅಳವಡಿಸುವ ಕೆಲಸ ಸಹ ಮಾಡಿಲ್ಲ. ಇದೀಗ 7 ಗೇಟ್​ಗಳು ಅಪಾಯದ ಅಂಚಿನಲ್ಲಿ ಇವೆ ಎಂಬ ವಿಚಾರ ತಿಳಿದು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ತುಂಗಭದ್ರಾ ಜಲಾಶಯದಲ್ಲಿ 80 ಟಎಂಸಿ ನೀರು ಸಂಗ್ರಹವಾಗಿದೆ. ಮೂರು ಗೇಟ್​ಗಳಿಂದ 13 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

1 ಲಕ್ಷ 50 ಸಾವಿರ ಕ್ಯೂಸೆಕ್ಸ್ ಒಳಹರಿವು ಬಂದರೆ ಜಲಾಶಯದ ಎಲ್ಲ 33 ಗೇಟ್​ಗಳನ್ನು ತೆರೆಯಬೇಕಾಗುತ್ತದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹೆಚ್ಚಿನ ಒಳಹರಿವು ಬಂದರೆ ಎಲ್ಲ ಗೇಟ್​ಗಳನ್ನು ತೆರೆಯಲು ಸಾಧ್ಯವಾಗದೆ ಡ್ಯಾಂಗೆ ಅಪಾಯವಾಗುವ ಸಾಧ್ಯತೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X