ಗುಬ್ಬಿ | ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ತಲಾ ಆದಾಯ ಹೆಚ್ಚಿಳ : ಶಾಸಕ ಎಸ್.ಆರ್.ಶ್ರೀನಿವಾಸ್

Date:

Advertisements

ಎಲ್ಲಾ ರಂಗದಲ್ಲೂ ಶಕ್ತಿಯುತವಾಗಿ ಬೆಳೆದ ನಮ್ಮ ದೇಶದಲ್ಲಿ ಕರ್ನಾಟಕ ಹೆಚ್ಚಿನ ತಲಾ ಆದಾಯ ಹೊಂದಿದೆ. 1.77 ಲಕ್ಷ ರೂಗಳ ತಲಾ ಆದಾಯ ಇದ್ದ ನಮ್ಮ ರಾಜ್ಯ ಕಳೆದ ಮೂರು ವರ್ಷದಲ್ಲಿ 2.46 ಲಕ್ಷ ರೂಗಳನ್ನು ಹೆಚ್ಚಿಸಿಕೊಂಡಿದೆ. ಇಲ್ಲಿ ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆಯೂ ಪ್ರಮುಖ ಪಾತ್ರ ವಹಿಸಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಮಾತನಾಡಿದ ಅವರು ಆರ್ಥಿಕವಾಗಿ ಬೆಳೆದ ನಾಲ್ಕನೇ ದೇಶ ಎಂದು ಹೇಳುವ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ತಲಾ ಆದಾಯ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರಗಣ್ಯ ಎನಿಸಿದೆ ಎಂದರು.

ಸ್ವಾಂತಂತ್ರ್ಯ ದಿನಾಚರಣೆ ದಿನದಂದು ತ್ಯಾಗ ಬಲಿದಾನ ಮಾಡಿದ ಗಣ್ಯರನ್ನು ಸ್ಮರಿಸುವ ದಿನವಾಗಿ ಹಾಗೂ ಯುವ ಪೀಳಿಗೆಗೆ ದೇಶ ಭಕ್ತಿ ಬೆಳೆಸುವ ಕಾರ್ಯಕ್ರಮವಾಗಿ ಆಚರಣೆ ಆಗಬೇಕು. ತ್ವರಿತಗತಿಯಲ್ಲಿ ಬೆಳೆಯುತ್ತಿರುವ ನಮ್ಮ ದೇಶದ ಮುಂದಿನ ಪೀಳಿಗೆಗೆ ಸ್ವಾತಂತ್ರ್ಯ ಬಗ್ಗೆ ಅರಿವು ಮೂಡಬೇಕಿದೆ ಎಂದ ಅವರು ಎಲ್ಲಾ ರಂಗದಲ್ಲೂ ಶಕ್ತಿಯುತವಾಗಿ ಬೆಳೆದ ನಮ್ಮ ದೇಶ ಸಾಕ್ಷರತೆಯಲ್ಲಿ ಈ ಹಿಂದೆ ಇದ್ದ ಶೇಕಡಾ 12 ರಿಂದ ಈಗ ಶೇಕಡಾ 80 ರಷ್ಟು ಪ್ರಗತಿ ಹೊಂದಿದೆ. ಇದೇ ಹಾದಿಯಲ್ಲಿ ದೇಶವನ್ನು ಮತ್ತಷ್ಟು ಗಟ್ಟಿಯಾಗಿ ಬೆಳೆಸುವ ಕೆಲಸ ಒಟ್ಟಿಗೆ ಮಾಡೋಣ ಎಂದು ಕರೆ ನೀಡಿ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳನ್ನು ಕೋರಿದರು.

Advertisements

ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಆರತಿ.ಬಿ ಸಂದೇಶ ನೀಡಿ ಸ್ವಾತಂತ್ರ್ಯ ಎಂದರೆ ದೇಶದ ಪ್ರಗತಿಯ ಜೊತೆ ಸಮಾಜ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆ ಆಗಿದೆ. ಪ್ರಸ್ತುತ ವಿದ್ಯಮಾನದಲ್ಲಿ ಸಮೃದ್ಧ ದೇಶವನ್ನು ಕಟ್ಟುವ ಕೆಲಸ ಆಗಬೇಕಿದೆ. ನಮ್ಮಲ್ಲಿನ ಯುವಶಕ್ತಿ ಬಳಸಿ ಇಡೀ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲು ಮೊದಲು ದೇಶಾಭಿಮಾನ ಬೆಳೆಸಬೇಕಿದೆ. ಈ ಕೆಲಸಕ್ಕೆ ಈ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ. ಮುಂದಿನ ಪೀಳಿಗೆ ಮಕ್ಕಳಿಗೆ ಮೊದಲು ದೇಶದ ಬಗ್ಗೆ ಪ್ರೇಮ, ವಾತ್ಸಲ್ಯ, ಅಭಿಮಾನ ಬೆಳೆಸುವ ಕೆಲಸ ಮಾಡೋಣ ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸ ನೀಡಿದ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಜಿ.ಸಿದ್ದರಾಮಯ್ಯ ಮಾತನಾಡಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಾವೆಲ್ಲರೂ ಒಂದೇ ಎಂಬ ಭಾವನೆ ಗಟ್ಟಿಯಾಗಿ ಮೂಡಬೇಕು. ವ್ಯಾಪಾರಕ್ಕೆ ಬಂದ ಬ್ರಿಟಿಷರು ನಮ್ಮಲ್ಲಿನ ಪ್ರಾಂತ ಆಳ್ವಿಕೆಯನ್ನು ಜಾಣತನದಲ್ಲಿ ಕಬಳಿಸಿ ಇಡೀ ದೇಶವನ್ನೇ ಆಳ್ವಿಕೆ ಮಾಡಿದರು. ನಮ್ಮನ್ನು ಗುಲಾಮರಾಗಿ ಮಾಡಿದ್ದ ಸಮಯದಲ್ಲಿ ಮಹಾತ್ಮ ಗಾಂಧೀಜಿ ಅವರ ನೇತೃತ್ವದ ಚಳವಳಿ ಸ್ವಾತಂತ್ರ್ಯ ತಂದು ಕೊಟ್ಟಿತು. ಆ ದಿನ ಶುಕ್ರವಾರ ಆಗಿತ್ತು. ಅದೇ ರೀತಿ ಈ ವರ್ಷವೂ ಶುಕ್ರವಾರ ಬಂದಿದೆ ಎಂದರು.

ಇದೇ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮ ಮುನ್ನ ಪೊಲೀಸ್ ಎನ್ ಸಿಸಿ, ಸ್ಕೌಟ್ ಅಂಡ್ ಗೈಡ್ಸ್, ಗೃಹರಕ್ಷಕ ದಳದಿಂದ ಆಕರ್ಷಕ ಕವಾಯತು ನಡೆಸಲಾಯಿತು. ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಮಾಜಿ ಯೋಧರಿಗೆ ಸನ್ಮಾನ ಮಾಡಲಾಯಿತು. ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಆಯಿಷಾ ತಾಸೀನ್, ಉಪಾಧ್ಯಕ್ಷೆ ಶ್ವೇತಾ ಸೇರಿದಂತೆ ಎಲ್ಲಾ ಪಪಂ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಮಾಜ ಸೇವಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X