ನಮ್ಮ ಸಮಾಜದಲ್ಲಿ ಪ್ರಸ್ತುತ ದಿನಗಳಲ್ಲಿ ಯಾವಾಗ ಜಾತಿ ವ್ಯವಸ್ಥೆ ಮತ್ತು ಭ್ರಷ್ಟಾಚಾರ ನಿಲ್ಲುತ್ತೋ ಆಗ ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಂತೆ ಎಂದು ಕೋಲಾರ ಜಿಲ್ಲೆ ಮಾಲೂರು ತಾಪಂ ಇಒ ನಾಗೇಶ್ ಅಭಿಪ್ರಾಯಪಟ್ಟರು.
ತಾಲೂಕಿನ ಚಿಕ್ಕತಿರುಪತಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಚಿಕ್ಕತಿರುಪತಿ ಗ್ರಾಪಂ ಅಧ್ಯಕ್ಷ ಜಿ ವಿ ಮಂಜುನಾಥ್ ಅವರು ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ತಾಪಂ ನಾಗೇಶ್, “ಸ್ವಾತಂತ್ರ್ಯ ಪಡೆಯುವುದಕ್ಕೆ ಈ ಮೊದಲು ಹಲವಾರು ಹೋರಾಟಗಾರು ಅಂದಿನ ಬ್ರಿಟಿಷ್ ಸರ್ಕಾರ ವಿರುದ್ಧ ಹೋರಾಡಿದ್ದಾರೆ. ಅದರ ಪ್ರತಿಫಲವಾಗಿ ಇಂದು ನಾವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬಂತೆ ನೀವು ಈ ದೇಶದ ಆಸ್ತಿ, ನೀವು ಚನ್ನಾಗಿ ವಿದ್ಯಾಭ್ಯಾಸ ಮಾಡಿ ಸಮಾಜ ಅಂಕುಡೊಂಕುಗಳನ್ನು ಬದಲಾವಣೆ ಮಾಡಬೇಕು ಅಲ್ಲದೇ ನಿಮಗೆ ಗುರಿ ಮತ್ತು ಸಂಕಲ್ಪ ಬಹಳ ಮುಖ್ಯ ಈ ನಿಟ್ಟಿನಲ್ಲಿ ಉತ್ತಮ ಶಿಕ್ಷಣ ಪಡೆಯಬೇಕು” ಎಂದು ಅವರು ಹೇಳಿದರು.
ಧ್ವಜಾರೋಹಣಕ್ಕೂ ಮೊದಲು ಚಿಕ್ಕತಿರುಪತಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವೇಷ ಭೂಷಣ ಧರಿಸಿ ಮೆರವಣಿಗೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕರಾದ ಕಾಂತಮ್ಮ ಅವರು ಪ್ರತಿವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿದರು ಮತ್ತು ಎರಡು ಶಾಲೆಗಳಿಗೆ ಅವಶ್ಯಕತೆ ಇರುವ ಸೌಂಡ್ ಸಿಸ್ಟಮ್ ಅನ್ನು ಕೊಡಿಸುವ ಭರವಸೆ ನೀಡಿದರು. ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಚೇತನ್ ಅವರು ಲೇಖನಿ ಸಾಮಾಗ್ರಿಯನ್ನು ವಿತರಿಸಿದರು.
ಲಕ್ಕೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಿಗೆ ಪ್ರಶಸ್ತಿ ಮತ್ತು ಪ್ರಮಾಣ ಪತ್ರವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆಯನ್ನು ಮಾಜಿ ಗ್ರಾಪಂ ಅಧ್ಯಕ್ಷರಾದ ಟಿ. ಎಂ ರಾಮ್ ಪ್ರಸಾದ್ ಅವರು ಸಿಹಿಯನ್ನು ರಾಜಶೇಖರ್ ಅವರು ವ್ಯವಸ್ಥೆ ಮಾಡಿದ್ದರು.
ಇದನ್ನೂ ಓದಿ: ಕೋಲಾರ | ಗುದ್ದಲಿ ಪೂಜೆಯಾಗಿ ವರ್ಷ ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ: ಸ್ಥಳೀಯರ ಆಕ್ರೋಶ
ಕಾರ್ಯಕ್ರಮದಲ್ಲಿ ಪ್ರೌಢ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ವೆಂಕಟೇಶ್ ಮೂರ್ತಿ ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ದೇವಕಿ, ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಶೇಖರ್, ಆಲಂಬಾಡಿ ಬಾಬು, ಗಣಗಲೂರು ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಜನನಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮೋಹನ್ ಸುಂದರ್, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರಕಲಾ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸುಜಾತ, ಶಿಕ್ಷಕರಾದ ರಾಮಾಂಜಿನಪ್ಪ, ಮಾದಪ್ಪ, ಚೌಡರೆಡ್ಡಿ, ಶಂಕರ್, ವನೀತ, ಮಂಜುಳ, ಅಂಬುಜಾಕ್ಷಿ. ಪ್ರಾಥಮಿಕ ಶಾಲೆಯ ಶಿಕ್ಷಕರಾದ ನಾರಾಯಣಪ್ಪ, ಮುತ್ತಣ್ಣ, ಮಂಜುಳ, ಶಾರದಮ್ಮ, ವಿಜಯ್ ಕುಮಾರ್, ಅಂಗನವಾಡಿಯ ಸುಮಿತ್ರಮ್ಮ , ಹೇಮಲತಾ ಹಾಗೂ ಗ್ರಂಥಾಲಯ ಮೇಲ್ವಿಚಾರಕರಾದ ನಾರಾಯಣಪ್ಪ ಸೇರಿದಂತೆ ಪೋಷಕರು ಉಪಸ್ಥಿತರಿದ್ದರು.