79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯ ದಿನವನ್ನು ಎಲ್ಲಾ ಅಧಿಕಾರಿಗಳು ಹಾಗೂ ಶಾಲೆಯ ಮಕ್ಕಳು ಸೇರಿ ಅದ್ದೂರಿಯಿಂದ ರಾಷ್ಟ್ರಧ್ವಜವನ್ನು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿದರು. ಹಾಗೆಯೇ ಸ್ವಾತಂತ್ರ ಬಂದ ಕ್ಷಣದ ಮಾಹಿತಿ ಕುರಿತು ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವರಿ ಸಚಿವರು ಮಾತಾಡಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮರ ಬಿದ್ದು ವ್ಯಕ್ತಿ ಸಾವು
ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಹಾಗೆಯೇ, ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ, ಶೃಂಗೇರಿ ಕ್ಷೇತ್ರ ಶಾಸಕ ಟಿ.ಡಿ ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಭೋಜೆ ಗೌಡ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪಂಚಾಯತ್ ಸಿಇಒ ಕೀರ್ತನಾ, ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.