ಯಲ್ಲಾಪುರ | ಓವರ್‌ಟೇಕ್‌ ಮಾಡುವಾಗ ಲಾರಿಗೆ KSRTC ಬಸ್‌ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು

Date:

Advertisements

ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.

ಯಲ್ಲಾಪುರದ ಮಾವಳ್ಳಿ ಕ್ರಾಸ್‌ ಬಳಿ ಘಟನೆ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ, ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಹಾಗೂ ಸುಮಾರು 45 ವರ್ಷದ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.

Advertisements

ಬಸ್‌ ಚಾಲಕ ಯಮನಪ್ಪ ಮಾಗಿ ಅವರ ವಿರುದ್ಧ ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​​ ಮಾವಳ್ಳಿ ಕ್ರಾಸ್‌ ಬಳಿ ಓವರ್‌ಟೇಕ್ ಮಾಡುವಾಗ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಲಾರಿಯ ಇಂಡಿಕೇಟರ್‌ ಹಾಕದೆ, ನಿಲ್ಲಿಸಿದ್ದ. ಕತ್ತಲೆ ಇದ್ದ ಕಾರಣ, ಲಾರಿ ಇರುವುದು ಸ್ಪಷ್ಟವಾಗಿ ಗೋಚರಿಸದೇ ಇರುವುದು ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X