ಕೊಪ್ಪಳ ತಾಲೂಕಿನ ತಳಕಲ್‌ನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಂದು ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ 20 ಮಂದಿ ಗಾಯಗೊಂಡಿದ್ದಾರೆ. ಆಟವಾಡುತ್ತಿದ್ದ ಬಾಲಕರ ಮೇಲೆಯೂ ದಾಳಿ ಮಾಡಿವೆ. ಗಾಯಗೊಂಡ ಮಕ್ಕಳನ್ನು ಜಿಲ್ಲಾಸ್ಪತ್ರಗೆ ಸೇರಿಸಲಾಗಿದೆ. ಇದರಿಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ಜಿಲ್ಲಾದ್ಯಂತ ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳಿಂದ ಜನಸಾಮಾನ್ಯರು ಮತ್ತು ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿವೆ.
ಸ್ಥಳೀಯ ನಿವಾಸಿ ಇಸ್ಮಾಯಿಲ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗಂಗಾವತಿ ನಗರದ ಇಸ್ಲಾಂಪುರದ ಇಲಾಹಿ ಬಡಾವಣೆಯಲ್ಲಿ ಮಗುವಿನ ಮೇಲೆ ನಾಯಿ ದಾಳಿ ಮಾಡಿದ ಘಟನೆ ಕೇಳಿಬರುತ್ತಿದೆ. ನಗರಸಭೆ ಅಧಿಕಾರಿಗಳಿಗೆ ಈ ಕುರಿತು ಬಡಾವಣೆಯವರು ಹೇಳಿದರೆ ನಗರಸಭೆ ಮುಖ್ಯಾಧಿಕಾರಿ, ʼಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲʼವೆಂದು ಉಡಾಫೆಯ ಉತ್ತರ ನೀಡಿದ್ದೂ ಅಲ್ಲದೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಮುಕ್ತಗೊಳಿಸಲು ದೇಶದ ಅಸಂಖ್ಯಾತ ವೀರರು ತಮ್ಮ ಪ್ರಾಣ ಪಣಕ್ಕಿಟ್ಟರು: ಜಿಲ್ಲಾಧಿಕಾರಿ
“ಕೊಪ್ಪಳ ನಗರದಲ್ಲಿಯೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರ ಕುರಿತು ಹಲವು ಬಾರಿ ನಗರಸಭೆಗೆ ಮನವಿ ಸಲ್ಲಿಸಿದರೂ ಕಿವುಡರಂತೆ ವರ್ತಿಸುತ್ತಿದ್ದಾರೆ” ಎಂದು ನಗರದ ಗಡಿ ವೃತ್ತದ ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನಾದರೂ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ನಗರಸಭೆ ಅಧಿಕಾರಿಗಳು ಹೆಚ್ಚೆತ್ತು ಬೀದಿ ನಾಯಿಗಳ ಹಾವಳಿ ತಪ್ಪಿಸುತ್ತಾರೋ ಇಲ್ಲವೋ ಕಾದು ಎಂಬುದನ್ನು ಕಾದು ನೋಡಬೇಕಾಗಿದೆ.
https://shorturl.fm/UEkFA