ಎಸ್‌ಸಿಎಸ್‌ಸಿ/ಟಿಎಸ್‌ಪಿ | ₹38,717 ಕೋಟಿ ವೆಚ್ಚ, ಶೇ.97ರಷ್ಟು ಪ್ರಗತಿ: ಸಿಎಂ ಸಿದ್ದರಾಮಯ್ಯ

Date:

Advertisements

ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧ ಸಭಾಂಗಣದಲ್ಲಿ ಶನಿವಾರ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ” ಎಂದು ಹೇಳಿದರು.

Advertisements

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು” ಎಂದು ಸೂಚನೆ ನೀಡಿದರು.

“ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ” ಎಂದರು.

“ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು” ಎಂದು ಹೇಳಿದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ” ಎಂದರು.

“ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಳೆದ ಸಾಲಿನಲ್ಲಿ ಎಸ್‌ಸಿಸಿಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು” ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X