ಉಡುಪಿ | ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ಪೂರ್ಣಗೊಳಿಸಿ – ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

Advertisements

ಉಡುಪಿ ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಉಡುಪಿ –
ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರುಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 169 ಎ ಗೆ ಸಂಬಂಧಿಸಿದಂತೆ ಹಾಗೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ
ಹೆಚ್ಚಿನ ತೊಂದರೆ ಉಂಟಾಗುತ್ತಿದೆ. ಮಳೆಯಿಂದಾಗಿ ರಸ್ತೆಗಳು ಹೊಂಡ-ಗುಂಡಿಗಳಿಂದ ಕೂಡಿದ್ದು, ಇವುಗಳ ದುರಸ್ಥಿಗೆ ಹಾಗೂ ನಿರ್ವಹಣೆಗೆ ಮುಂದಾಗಬೇಕು ಎಂದರು.

NH MEETING 11

ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಪರಿಹಾರದ ಹಣವನ್ನು ಕಾಲಮಿತಿಯಲ್ಲಿ ನೀಡಬೇಕು ಎಂದ ಅವರು, ಸೆಪ್ಟಂಬರ್ ಮೊದಲ ವಾರದಿಂದ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

Advertisements

ಕರಾವಳಿ ಜಂಕ್ಷನ್‌ನಲ್ಲಿ ಫ್ರೀ ಏರಿಯಾ ಅಳವಡಿಸುವುದರ ಮೂಲಕ ಲಘು ವಾಹನಗಳಿಗೆ ಸಂಚರಿಸಲು ಅನುಕೂಲವಾಗುವಂತೆ ಕಾಮಗಾರಿ ಮುಗಿಸಬೇಕು. ಶಾಶ್ವತ ಕಾಮಗಾರಿಗಳನ್ನು ಆರಂಭಿಸುವ ಮುನ್ನ ತಾತ್ಕಾಲಿಕ ರಸ್ತೆಗಳಲ್ಲಿರುವ ಹೊಂಡ-ಗುಂಡಿಗಳನ್ನು ತುರ್ತಾಗಿ ಮುಚ್ಚಿಸುವ ಕೆಲಸವಾಗಬೇಕು. ಈಗಾಗಲೇ ದಾಖಲೆಗಳನ್ನು ನೀಡದಿರುವ 18 ಜನರಿಗೆ ನ್ಯಾಯಾಲಯದ ಮೂಲಕ ಪರಿಹಾರ ಠೇವಣಿ ಇರಿಸಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಣ್ಣ ಪುಟ್ಟ ಕಾರಣಗಳಿಂದ ಬಾಕಿ ಉಳಿದಿರುವ 90 ಭೂಸ್ವಾಧೀನ ಪ್ರಕರಣಗಳಿಗೆ 2 ದಿನಗಳ ಒಳಗಾಗಿ 3ಡಿ ಸಮರ್ಪಕಗೊಳಿಸಿ, ಬೆಂಗಳೂರು ಆರ್.ಓ ಕಚೇರಿಗೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಹೆಬ್ರಿ-ಚಾರದವರೆಗೆ ಮತ್ತು ಆಗುಂಬೆ ಘಾಟ್‌ನ ಹೆದ್ದಾರಿಯ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧವಾಗಿದೆ. ಈ ಎರಡೂ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳನ್ನು ತ್ವರಿತವಾಗಿ ಫೂರ್ಣಗೊಳಿಸಿ, ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಸೂಚನೆ ನೀಡದರು. ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯ ಕಾಂಕ್ರೀಟಿಕರಣ ಮುಕ್ತಾಯಗೊಂಡಿದ್ದು, ಎರಡೂ ಬದಿಯ ಇವಿಟ್‌ಮೆಂಟ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಸೆಪ್ಟಂಬರ್ 15 ಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಾಹನಗಳ ಬದಲಿ ಮಾರ್ಗ ವ್ಯವಸ್ಥೆಗೆ ಈಗಾಗಲೇ ಆದೇಶ ಮಾಡಲಾಗಿದೆ. ಅಲ್ಲಿನ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಇತರೆ ಭಾಗಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಸಾರ್ವಜನಿಕ ವಾಹನಗಳ ಚಾಲನೆಗೆ ಅಗತ್ಯವಿರುವ ಬದಲಿ ತಾತ್ಕಾಲಿಕ ರಸ್ತೆಗಳನ್ನು ಸಹ ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಸೂಚಿಸಿದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನಗಳಿಗೆ ಸಂಚರಿಸಲು ಒಂದು ಬದಿಯಲ್ಲಿ ಅವಕಾಶ ಕಲ್ಪಿಸಿ, ಭಾರೀ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡುವುದರೊಂದಿಗೆ ಕಾಮಗಾರಿ ಆರಂಭಿಸುವಂತೆ ಸಲಹೆ ನೀಡಿದರು. ಸಭೆಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಡಿ.ಎಫ್.ಓ ಗಣಪತಿ, ಎಎಸ್‌ಪಿ ಸುಧಾಕರ್ ನಾಯಕ್, ಪೌರಾಯುಕ್ತ ಮಹಾಂತೇಶ ಹಂಗರಗಿ,
ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ, ಎನ್.ಹೆಚ್ ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X