ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎನ್ ಆರ್ ಪುರದ ಶೇಖರಪ್ಪ ಎಂಬುದಾಗಿ ತಿಳಿದು ಬಂದಿದೆ ಎಂದಿದ್ದಾರೆ.ಇನ್ನೂ ಒಮಿನಿ ಹಾಗೂ ಪಿಕಪ್ ನಡುವಿನ ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂಬ ಮಾಹಿತಿಯಾಗಿದೆ.
ಎಲ್ಲಾ ಗಾಯಾಳುಗಳನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿ ಚಿಕಿತ್ಸೆ ಕೊಡಿಸಿ, ಶಿವಮೊಗ್ಗಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.
ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿ ನೀಡಿ, ಗಾಯಾಳುಗಳಿಗೆ ಚಿಕಿತ್ಸೆಯನ್ನು ಮುಂದೆ ನಿಂತು ಕೊಡಿಸುತ್ತಿದರು. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.