ಉಡುಪಿ | ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಸಲ್ಲಿಸಿರುವ ಪಿ ಐ ಎಲ್ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗೆ ಮನವಿ

Date:

Advertisements

ಪರಶುರಾಮ ಥೀಮ್ ಪಾರ್ಕ್ ನಲ್ಲಿ ಹೊಸ ಕಂಚಿನ ಪರಶುರಾಮ ಮೂರ್ತಿಯನ್ನು ನಿರ್ಮಿಸಲು ತಮ್ಮ ಸಹಿತ ಬೇರೆ ಇಲಾಖಾ ಮುಖ್ಯಸ್ಥರನ್ನು ಪಕ್ಷಕಾರರನ್ನಾಗಿಸಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿರುತ್ತದೆ ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಸೂಕ್ತ ತನಿಖೆ ನಡೆಸುವಂತೆ ಸಮಾಜ ಸೇವಕ, ಮಾಹಿತಿ ಹಕ್ಕು ಕಾರ್ಯಕರ್ತಉಮೇಶ್ ಕಲ್ಲೊಟ್ಟೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಗೆ ಹೋಗಲು ಕಾಂಕ್ರೀಟ್ ರಸ್ತೆಗೆ ಬಿಲ್ಲು ಬಿಡುಗಡೆಯಾಗಲು ಬಾಕಿ ಇರುತ್ತದೆ. ಪರಶುರಾಮ ಥೀಮ್ ಪಾರ್ಕ್ ಗೆ ಹೋಗಲು ಕಾಂಕ್ರೀಟ್ ರಸ್ತೆಗೆ ಯಾವುದೇ ಇಲಾಖೆಯಿಂದ ಅನುಮತಿ ಪಡೆಯದೇ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಯನ್ನು ನಿರ್ಮಿಸದ ಗುತ್ತಿಗೆದಾರರಿಗೆ ಬಿಲ್ಲು ಬಿಡುಗಡೆಯಾಗದೆ ಬಾಕಿ ಇರುತ್ತದೆ. ಕಾಂಕ್ರೀಟ್ ರಸ್ತೆ ಅಕ್ರಮವಾಗಿ ಹಣ ಬಳಕೆಯಾಗಿರುವ ಬಗ್ಗೆ GST ಮತ್ತು IT ಇಲಾಖೆಯಿಂದ ತನಿಖೆಯಾಗಬೇಕು. ಹೊಸ ಕಂಚಿನ ಪರಶುರಾಮ ಮೂರ್ತಿಯನ್ನು ನಿರ್ಮಿಸಲು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮತ್ತು ಸದ್ರಿ ಕಾಂಕ್ರೀಟ್ ರಸ್ತೆಗೆ ಹಣವನ್ನು ಬಿಡುಗಡೆ ಮಾಡಲು ಸಂಬಂಧ ಇರುವ ಬಗ್ಗೆ ತಾವು ಸರಕಾರಕ್ಕೆ ಪತ್ರವನ್ನು ಬರೆದು ಯಾವುದೇ ಹಣವನ್ನು ಬಿಡುಗಡೆ ಮಾಡಬಾರದು. ಇದ್ದು ಪರಶುರಾಮ ಮೂರ್ತಿಗೆ ಸರಕಾರದಿಂದ ಶಿಲ್ಪಿಗೆ ಬಿಡುಗಡೆಯಾಗಿರುವ ಹಣವನ್ನು ವಸೂಲು ಮಾಡಲು ಕ್ರಮವನ್ನು ಕೈಗೊಳ್ಳಬೇಕೇ ಹೊರತು ಪುನಃ ಸರಕಾರದಿಂದ ಹಣ ಬಿಡುಗಡೆ ಮಾಡಿ ಪರಶುರಾಮ ಮೂರ್ತಿಯನ್ನು ನಿರ್ಮಿಸುವುದು ಕಾನೂನು ಬಾಹಿರವಾಗಿರುತ್ತದೆ ಹಾಗೂ ಈ ಬಗ್ಗೆ ತಾವು ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

1006735405
1006735407
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X