ಕೊಡಗು | ಕೆಎಸ್ಆರ್ಟಿಸಿ ಹೊಸ ಬಸ್, ಮಾರ್ಗಗಳಿಗೆ ಶಾಸಕ ಎ ಎಸ್ ಪೊನ್ನಣ್ಣ ಚಾಲನೆ

Date:

Advertisements

ಕೊಡಗು ಜಿಲ್ಲೆ, ವಿರಾಜಪೇಟೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ, 8 ಹೊಸ ಬಸ್ ಹಾಗೂ 8 ಹೊಸ ಮಾರ್ಗಗಳಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ ಚಾಲನೆ ನೀಡಿದರು.

ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ನೂತನ ಬಸ್ ಮಾರ್ಗಗಳನ್ನು ಹಾಗೂ ಮಾರ್ಗಗಳಿಗೆ ಹೆಚ್ಚುವರಿಯಾಗಿ ಎಂಟು ಹೊಸ ಬಸ್ ಗಳನ್ನು ಶಾಸಕರು ಸಾರ್ವಜನಿಕರಿಗೆ ಲಭಿಸುವಂತೆ ಚಾಲನೆ ನೀಡಿದ್ದಾರೆ.

ಶಾಸಕರಾದ ಎ ಎಸ್ ಪೊನ್ನಣ್ಣ ಮಾತನಾಡಿ ” ಆಧುನಿಕತೆ ಹಾಗೂ ನಗರೀಕರಣ ವೃದ್ಧಿಯಾದಂತೆಲ್ಲ ಜನಸಂದಣಿ ಜಾಸ್ತಿಯಾಗುವುದನ್ನು ಮನಗಂಡು ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೊಸ ಮಾರ್ಗಗಳನ್ನು ಹಾಗೂ ಸಾರ್ವಜನಿಕರು ಪ್ರಯಾಣಿಸಲು ಹೊಸ ಬಸ್ ಗಳನ್ನು ಈ ಭಾಗಕ್ಕೆ ಕಲ್ಪಿಸಲಾಗಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ” ಕರೆ ನೀಡಿದರು.

Advertisements

ಇದೇ ಸಂದರ್ಭದಲ್ಲಿ ಬಸ್ ನ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಂಸ್ಥೆಗೆ ಒಳ್ಳೆಯ ಹೆಸರು ತರುವಲ್ಲಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗಾಗಿ ಉಚಿತ ಬಸ್ ಸೌಲಭ್ಯವನ್ನು ಕಲ್ಪಿಸಿದ್ದು. ಇದರಿಂದ, ನಾಡಿನ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಗ್ಲಾಸ್ ಬ್ರಿಡ್ಜ್ ಯೋಜನೆ ಕೈಬಿಟ್ಟ ಸರ್ಕಾರ

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಜಾನ್ಸನ್, ವಿರಾಜಪೇಟೆ ಪುರಸಭೆಯ ಮುಖ್ಯಅಧಿಕಾರಿ ನಾಚಪ್ಪ, ವಿರಾಜಪೇಟೆ ಪುರಸಭೆ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಹಾಗೂ ಸದಸ್ಯರು, ತಾಲೂಕು ದಂಡಾಧಿಕಾರಿ, ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರು ಹಾಗೂ ಸದಸ್ಯರುಗಳು, ಕೆಎಸ್ಆರ್ಟಿಸಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಾರ್ವಜನಿಕರು, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X