ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಔರಾದ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ವಿರುದ್ಧ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಇದೇ ಪ್ರಕರಣದ ಸಂಬಂಧ ಬೀದರ್ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 20ರಂದು ಪ್ರತೀಕ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇದನ್ನು ಓದಿದ್ದೀರಾ? ಶಾಸಕ ಪ್ರಭು ಚವ್ಹಾಣ ಪುತ್ರನಿಂದ ಮೋಸ ಆರೋಪ : ಯುವತಿ ಕುಟುಂಬಸ್ಥರ ವಿರುದ್ಧ ದೂರು ದಾಖಲು
‘ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಹೋಟೆಲ್‌ವೊಂದರಲ್ಲಿ ಪ್ರತೀಕ್ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದರು. ಬೀದರ್‌ನಲ್ಲಿ ದಾಖಲಾಗದ ಪ್ರಕರಣವನ್ನು ಉಪ್ಫಾರಪೇಟೆಗೆ ವರ್ಗಾವಣೆ ಮಾಡಲಾಗಿದ್ದು, ಈ ಠಾಣೆಯಲ್ಲೂ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
ಮಹಾರಾಷ್ಟ್ರದ ಉದಗೀರ್ ಸಮೀಪದ ಹಣೆಗಾಂವ್ ತಾಂಡಾದ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುವುದಕ್ಕೂ ಮುನ್ನ ಸಂತ್ರಸ್ತೆ ಹಾಗೂ ಅವರ ತಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಿಗ್ಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.
