ಮಂಡ್ಯದಲ್ಲಿ ಚಿನ್ನಾಭರಣ ದರೋಡೆ: ಕೃತ್ಯ ನೋಡಿದ ವ್ಯಕ್ತಿಯನ್ನು ಕೊಲೆಗೈದು ಪರಾರಿಯಾದ ಕಳ್ಳರು

Date:

Advertisements

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ ಘಟನೆಯೊಂದು ನಡೆದಿದೆ. ಚಿನ್ನಾಭರಣ ಮಳಿಗೆಯೊಂದಕ್ಕೆ ದರೋಡೆಗೆ ಬಂದಿದ್ದ ಕಿಡಿಗೇಡಿಗಳು, ತಮ್ಮ ಕೃತ್ಯವನ್ನು ನೋಡಿದ ವ್ಯಕ್ತಿಯೊಬ್ಬರನ್ನು ಕೊಲೆಗೈದು ಪರಾರಿಯಾಗಿದ್ದಾರೆ.

ಕೊಲೆಯಾದ ವ್ಯಕ್ತಿ ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್‌ನ ಮಾಲೀಕ ಮಾದಪ್ಪ (75).

ಗ್ರಾಮದ ಮುಖ್ಯರಸ್ತೆಯಲ್ಲಿರುವ ಮಹಾಲಕ್ಷ್ಮೀ ಜ್ಯುವೆಲರ್ಸ್‌ಗೆ ರಾತ್ರಿ 2 ಗಂಟೆ ಸುಮಾರಿಗೆ ದರೋಡೆಕೋರರು ನುಗ್ಗಿದ್ದಾರೆ. ಗ್ಯಾಸ್ ಕಟ್ಟರ್ ಬಳಸಿ ಅಂಗಡಿಯ ಬಾಗಿಲನ್ನು ಒಡದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಶಬ್ದ ಕೇಳಿ ಬಂದ ಮಾದಪ್ಪನವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ, ಕತ್ತು ಹಿಸುಕಿ ಕೊಲೆಗೈದು ತಪ್ಪಿಸಿಕೊಂಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ದರೋಡೆಕೋರರು ಅಂಗಡಿಯಿಂದ 150 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, ಹಿತ್ತಾಳೆ ಒಡವೆಗಳು ಹಾಗೂ ಸುಮಾರು 30,000 ರೂ. ಮೌಲ್ಯದ ಕೃತಕ ಚಿನ್ನದ ಆಭರಣಗಳನ್ನು ಕದ್ದಿದ್ದಾರೆ. ಜೊತೆಗೆ, ಸಿಸಿಟಿವಿ ಕ್ಯಾಮರಾದ ಡಿವಿಆರ್ ಘಟಕವನ್ನೂ ಕಿತ್ತುಕೊಂಡು ಹೋಗಿದ್ದಾರೆ ಎಂದು ಅಂಗಡಿಯ ಮಾಲೀಕ ಶೇಷರಾವ್ ಹೇಳಿದ್ದಾರೆ.

ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿ. ಕೃಷ್ಣಪ್ಪ, ಸಿಪಿಐ ಬಿ.ಎಸ್. ಶ್ರೀಧರ್, ಮತ್ತು ಪಿಎಸ್‌ಐ ಡಿ. ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತಪಾಸಣೆ ಕೈಗೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ...

ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದು. ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ...

ಮಂಡ್ಯ | 20ನೇ ಶತಮಾನದ ಚಳವಳಿಗಳು ಮರುಕಳಿಸಬೇಕಿದೆ: ಡಾ. ಹೆಚ್ ವಿ ವಾಸು

ಇತ್ತೀಚಿನ ದಿನಗಳಲ್ಲಿ ಮತ್ತೊಬ್ಬರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಾವೇಕೆ ಭಾಗಿಯಾಗಬೇಕು ಎಂಬ...

ಮಂಡ್ಯ ಜಿಲ್ಲೆಯನ್ನು ಅಗ್ರಿಕಲ್ಚರ್ ಕ್ಯಾಪಿಟಲ್ ಆಫ್ ಇಂಡಿಯಾ ಮಾಡಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ

‌ಮಂಡ್ಯ ಜಿಲ್ಲೆಯನ್ನು ಅಗ್ರಿಕಲ್ಚರ್ ಕ್ಯಾಪಿಟಲ್ ಆಫ್ ಇಂಡಿಯಾ ಮಾಡಬೇಕು. ಏಕೆಂದರೆ, ಮಂಡ್ಯ...

Download Eedina App Android / iOS

X