ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ವಿಜಯೇಂದ್ರ

Date:

Advertisements

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಭಾನುವಾರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, “ಎಸ್‌ಐಟಿ ರಚನೆಯಾದಗಲೇ ಅದನ್ನು ಸ್ವಾಗತಿಸಿದ್ದೇವೆ” ಎಂದರು.

ಇದನ್ನು ಓದಿದ್ದೀರಾ? ಆ.17ರಂದು ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ, ಎಸ್‍ಐಟಿ ತನಿಖೆ ಶೀಘ್ರ ಮುಗಿಯಲಿ: ಬಿ ವೈ ವಿಜಯೇಂದ್ರ

Advertisements

“ಧರ್ಮಸ್ಥಳ ಕ್ಷೇತ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರಗಳನ್ನು ಸಹಿಸಲು ಸಾಧ್ಯವಿಲ್ಲ. ಡಿ.ಕೆ ಶಿವಕುಮಾರ್ ಅವರೇ ಈ ಬಗ್ಗೆ ಹೇಳಿದ್ದಾರೆ. ಆದರೆ ಅಂತಹ ಶಕ್ತಿಗಳ ವಿರುದ್ದ ಕ್ರಮಕ್ಕೆ ಸರ್ಕಾರ ಯಾಕೆ ಮುಂದಾಗುತ್ತಿಲ್ಲ” ಎಂದು ಪ್ರಶ್ನಿಸಿದರು.

vijayendra1

ಈ ವೇಳೆ ಬಿಜೆಪಿ ನಾಯಕರಾದ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ, ಸಂಸದ ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಭಗೀರಥಿ ಮುರುಳ್ಯ, ಉಮಾನಾಥ್‌ ಕೋಟ್ಯಾನ್, ಭರತ್ ಶೆಟ್ಟಿ, ಪ್ರತಾಪ ಸಿಂಹ ನಾಯಕ್, ಯಶ್‌ಪಾಲ್ ಸುವರ್ಣ ಹಾಗೂ ಇತರರು ಇದ್ದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X