ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 18) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು, ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದ್ದು, ಮುಂಗಾರು ಮಳೆ ಚುರುಕುಗೊಂಡಿದ್ದು, ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಕಾರಣ, ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಿಸಿದೆ.
ಈ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ಅವಧಿಯಲ್ಲಿ ಸರಿಹೊಂದಿಸಿಕೊಳ್ಳಲು ಆದೇಶದಲ್ಲಿ ಸೂಚಿಸಿದ್ದಾರೆ.