ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾನಸಗಂಗೋತ್ರಿಯಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ವಜ್ರ ಮಹೋತ್ಸವ ಆಚರಣೆಯಲ್ಲಿ ಭಾಗಿಯಾಗಲು ರಾಷ್ಟ್ರಪತಿ ಮೈಸೂರಿಗೆ ಆಗಮಿಸಲಿದ್ದಾರೆ.
ರಾಷ್ಟ್ರಪತಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು AIISH ನಿರ್ದೇಶಕಿ ಎಂ. ಪುಷ್ಪಾವತಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೆಎಸ್‌ಒಯು ಗೌರವ ಡಾಕ್ಟರೇಟ್
ಇದು ಎರಡನೇ ಬಾರಿಗೆ ರಾಷ್ಟ್ರಪತಿಗಳು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ 2022 ಸೆಪ್ಟೆಂಬರ್ 26ರಂದು ನಾಡ ಹಬ್ಬ ದಸರಾವನ್ನು ಉದ್ಘಾಟಿಸಿದ್ದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಂಗಳೂರಿಗೆ ತಲುಪಲಿದ್ದು, ಬಳಿಕ ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ.
ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಪೂರ್ವಭಾವಿ ಸಭೆ ನಡೆಸಿದ್ದಾರೆ. ಮುರ್ಮು ಅವರು ಭೇಟಿಯ ಸಮಯದಲ್ಲಿ ಭದ್ರತಾ ಲೋಪವಾಗಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
