ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾನಸಗಂಗೋತ್ರಿಯಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ವಜ್ರ ಮಹೋತ್ಸವ ಆಚರಣೆಯಲ್ಲಿ ಭಾಗಿಯಾಗಲು ರಾಷ್ಟ್ರಪತಿ ಮೈಸೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು AIISH ನಿರ್ದೇಶಕಿ ಎಂ. ಪುಷ್ಪಾವತಿ ತಿಳಿಸಿದ್ದಾರೆ.
