ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕು, ಕಿತ್ತೂರು ತಾಲೂಕು, ಬೈಲಹೊಂಗಲ ತಾಲೂಕು, ಸವದತ್ತಿ ತಾಲೂಕು ಹಾಗೂ ಖಾನಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು , ಮಲೆನಾಡಿನ ಹಲವೆಡೆ ಇನ್ನೆರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.